ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಆಸ್ಥಾನ ವಿದ್ವಾನ್ ಗೌರವ

September 28, 2019
11:15 AM

ಮಂಗಳೂರು: ಬೆಂಗಳೂರಿನ ಶ್ರೀ ಅವನಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂನ ಶ್ರೀ ಶಾರದಾ ಪೀಠ ವತಿಯಿಂದ ಅಕ್ಟೋಬರ್ 8ರಂದು ನಡೆಯುವ ಸಮಾರಂಭದಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಸ್ಥಾನ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ.

ನಾನಾ ಕ್ಷೇತ್ರಗಳಲ್ಲಿ ದುಡಿದ ಒಟ್ಟ ಐವರು ಮಹನೀಯರಿಗೆ ಈ ಪ್ರಶಸ್ತಿ ದೊರಕಲಿದ್ದು, ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಕಲಾವಿದರೊಬ್ಬರಿಗೆ ಅವನಿ ಶೃಂಗೇರಿ ಪೀಠದಿಂದ ಇದೇ ಮೊದಲ ಬಾರಿಗೆ ಆಸ್ಥಾನ ವಿದ್ವಾನ್ ಬಿರುದು ನೀಡಲಾಗುತ್ತಿದೆ ಎಂದು ಮಠದ ಭಕ್ತವೃಂದದವರಾದ ಶರವೂರು ಸುಬ್ರಹ್ಮಣ್ಯ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀಪುರಂನ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಅವನಿ ಶ್ರೀ ಶಾರದಾಪೀಠಂ ಮಠವಿದ್ದು, ಇಲ್ಲಿ ಕಾರ್ಯಕ್ರಮ ನಡೆಯಲಿದೆ. ತೆಂಕುತಿಟ್ಟಿನಲ್ಲಿ ಸುಮಾರು 60 ವರ್ಷಗಳ ಅನುಭವ ಇರುವ 71ರ ಹರೆಯದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ಹಿಂದೆ ಧರ್ಮಸ್ಥಳ, ಕದ್ರಿ, ಕಟೀಲು ಸಹಿತ ನಾನಾ ಮೇಳಗಳಲ್ಲಿ ಹಿಮ್ಮೇಳವಾದಕರಾಗಿ ದುಡಿದಿದ್ದಾರೆ. ಕಳೆದ 50 ವರ್ಷಗಳಿಂದ ಅವರು ಹಿಮ್ಮೇಳ ಶಿಕ್ಷಣ ನೀಡುತ್ತಿದ್ದು, ಸಾವಿರಾರು ಶಿಷ್ಯರನ್ನು ಹೊಂದಿದ್ದಾರೆ. ಈಗಾಗಲೇ ಸುಬ್ರಹ್ಮಣ್ಯ ಭಟ್ಟರಿಗೆ ಕಸಾಪ ರಾಜ್ಯ ಸಮ್ಮೇಳನದಲ್ಲಿ ಸನ್ಮಾನ, ಜಿಲ್ಲಾ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಸಹಿತ ಹಲವು ಕಡೆಗಳಲ್ಲಿ ಸನ್ಮಾನಗಳು, ಶಿಷ್ಯರಿಂದ ಅಭಿನಂದನಾ ಕಾರ್ಯಕ್ರಮಗಳು ನಡೆದಿವೆ. ಕಳೆದ ವರ್ಷ ಮಂಗಳೂರಿನಲ್ಲಿ ಅವರ ಶಿಷ್ಯರ ಸಮಾವೇಶ ನಡೆದಿತ್ತು. ತೆಂಕುತಿಟ್ಟಿನ ಪ್ರಸಕ್ತ ಹಿಮ್ಮೇಳ ಕಲಾವಿದರ ಪೈಕಿ ಬಹುತೇಕರು ಮಾಂಬಾಡಿ ಶಿಷ್ಯರಾಗಿದ್ದು, ದ.ಕ, ಕಾಸರಗೋಡು ಅಲ್ಲದೆ ಬೆಂಗಳೂರಿನಲ್ಲೂ ಶಿಷ್ಯರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror