ಸುಳ್ಯ: ಕರ್ನಾಟಕದ ಮಾಜಿ ಸಚಿವರು ಹಾಗೂ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರು ಆದ ತನ್ವೀರ್ ಸೇಠ್ ರವರ ಮೇಲಿನ ಕೊಲೆ ಯತ್ನ ಆಘಾತಕಾರಿ ಹಾಗೂ ಖಂಡನೀಯವೆಂದು ಕರ್ನಾಟಕ ಮುಸ್ಲಿಂ ಜಮಾಅತ್ ನ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಕುಂಞ ಗೂನಡ್ಕರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಸ್ಲಿಂ ಸಮುದಾಯದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ದಿವಂಗತ ಅಜೀಜ್ ಸೇಠ್ ರವರ ಪುತ್ರರಾದ ತನ್ವೀರ್ ಸೇಠ್ ರವರು ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಸಚಿವರಾಗಿದ್ದ ವೇಳೆ ಪ್ರಮುಖವಾಗಿ ಮುಸ್ಲಿಂ ಸಮುದಾಯದ ಏಳಿಗೆಗಾಗಿ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸಿದ್ದರು. ದುಷ್ಕರ್ಮಿಗಳಿಂದ ಅವರ ಮೇಲೆ ನಡೆದಂತಹ ಹಲ್ಲೆಯು ಪ್ರಜ್ಞಾವಂತ ಸಮಾಜವು ತಲೆತಗ್ಗಿಸುವಂತಹ ವಿಚಾರವಾಗಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯಿಂದ ಆಗ್ರಹಿಸುತ್ತೇವೆಂದು ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel