ಮಾಡಾವು 110 ಕೆವಿ ಸಬ್ ಸ್ಟೇಶನ್ ಗೆ ಪರಿವರ್ತಕ

August 22, 2019
10:01 PM

ಬೆಳ್ಳಾರೆ: ಅನೇಕ ಪ್ರಯತ್ನಗಳ ಬಳಿಕ ಇದೀಗ ಮಾಡಾವು 110 ಕೆವಿ ಸಬ್ ಸ್ಟೇಶನ್ ಗೆ ಪರಿವರ್ತಕ ತಲಪುತ್ತಿದೆ. ಈ ಮೂಲಕ ಬಳಕೆದಾರರ ಹೋರಾಟ ಭಾಗಶ: ಯಶಸ್ಸು ಕಂಡಿದೆ.

ಮಾಡಾವು 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಹಲವು ವರ್ಷಗಳಿಂದ ನಿಧಾನಗತಿಯಲ್ಲಿತ್ತು. ಪ್ರತೀ ಬಾರಿಯೂ ಅಧಿಕಾರಿಗಳು ಶೇ.80 ರಷ್ಟು ಕೆಲಸವಾಗಿದೆ ಎನ್ನುತ್ತಿದ್ದರು. ಆದರೆ ಬೆಳ್ಳಾರೆಯಲ್ಲಿ  ವಿದ್ಯುತ್ ಬಳಕೆದಾರರ ವೇದಿಕೆ ರಚನೆ ಮಾಡಿ ಹೋರಾಟಕ್ಕೆ ಇಳಿದಿದ್ದರು. ಸಮಗ್ರ ಮಾಹಿತಿ ಕಲೆ ಹಾಕಿದ ಬಳಿಕ ಶೇ.50 ರಷ್ಟೂ ಕಾರ್ಯಗಳು ಆಗದೇ ಇರುವುದು  ಬೆಳಕಿಗೆ ಬಂದಿತ್ತು. ಈ ಬಗ್ಗೆ ಸುಳ್ಯ ಶಾಸಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ  ವಾಸ್ತವಾಂಶ ಬಿಚ್ಚಿಡಲಾಗಿತ್ತು. ಈ ಸಂದರ್ಭ ಕೆಪಿಟಿಸಿಎಲ್ ಅಧಿಕಾರಿಗಳು ವಾಸ್ತವಾಂಶ ಒಪ್ಪಿಕೊಂಡು ತಕ್ಷಣವೇ ಕೆಲಸ ಮಾಡುವುದಾಗಿ ಹೇಳಿದ್ದರು.

ಇದೀಗ ಕಾಮಗಾರಿಗಳು ವೇಗವಾಗಿ ನಡೆಯುತ್ತಿದೆ. ಮಾಡಾವು ಸಬ್ ಸ್ಟೇಶನ್ ಗೆ ಅಗತ್ಯವಾಗದ ಪರಿವರ್ತಕ ಲಾರಿ ಮೂಲಕ ಆಗಮಿಸಿದೆ. ಟವರ್ ನಿರ್ಮಾಣ ಹಾಗೂ ಸಬ್ ಸ್ಟೇಶನ್ ಒಳಗಿನ ಕೆಲಸ ಕಾರ್ಯಗಳು ನಡೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror