ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ತಪ್ಪಿ ಹೋಗಿರುವುದನ್ನು ಪ್ರತಿಭಟಿಸಿ ಸುಳ್ಯ ಬಿಜೆಪಿ ನಡೆಸುತ್ತಿರುವ ಅಸಹಕಾರ ಚಳವಳಿ ಮುಂದುವರಿದಿದೆ.
Advertisement
ಬಿಜೆಪಿ ಜನಪ್ರತಿನಿಧಿಗಳ ರಾಜಿನಾಮೆಯೂ ಮುಂದುವರಿಯುತ್ತಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಎಪಿಎಂಸಿಗಳಿಗೆ ಆಯ್ಕೆಯಾದ ಬಿಜೆಪಿ ಜನಪ್ರತಿನಿಧಿಗಳು ತಮ್ಮ ರಾಜಿನಾಮೆ ಪತ್ರವನ್ನು ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಲ್ಲದೆ ಜನಪ್ರತಿನಿಧಿಗಳು ಕಚೇರಿಗಳಿಗೂ ತೆರಳುತ್ತಿಲ್ಲ. ಸುಳ್ಯ ವಿಧಾನಸಭಾ ವ್ಯಾಪ್ತಿಯಲ್ಲಿ ಇದುವರೆಗೆ ಒಟ್ಟು 318 ಮಂದಿ ಬಿಜೆಪಿ ಜನಪ್ರತಿನಿಧಿಗಳು ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
Advertisement
ಶಾಸಕರಿಗೆ ಸಚಿವ ಸ್ಥಾನ ತಪ್ಪಿರುವುದರಿಂದ ಸುಳ್ಯ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಇದು ಸರಿ ಪಡಿಸುವವರೆಗೆ ಅಸಹಕಾರ ಚಳವಳಿಯೂ ಮುಂದುವರಿಯಲಿದೆ ಎಂದು ಅವರು ಹೇಳಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement