ಮುಂದುವರಿದ ಮನೆಮನೆ ಇಂಗುಗುಂಡಿ ಅಭಿಯಾನ

July 25, 2019
11:30 AM

ಸುಳ್ಯ: ಜಲಸಂರಕ್ಷಣೆಯ ಉದ್ದೇಶದಿಂದ ಮನೆಮನೆ ಇಂಗುಗುಂಡಿ ಅಭಿಯಾನ ಹಮ್ಮಿಕೊಂಡಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಭಿಯಾನ ಮುಂದುವರಿದಿದೆ. ಕುಕ್ಕುಜಡ್ಕದ ಪ್ರೌಢಶಾಲೆ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆ,    ಕುಕ್ಕುಜಡ್ಕದ ಪ್ರೌಢಶಾಲೆ, ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಅಭಿಯಾನ ನಡೆಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಪ್ರತಿಕ್ರಿಯೆ ನೀಡಿದರು.

Advertisement
Advertisement

ಶಿಕ್ಷಣ ಇಲಾಖೆ ಸಹಕಾರದೊಂದಿಗೆ   ಜಲಾಮೃತ ಯೋಜನೆಯ ಅಡಿಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಬುಧವಾರದಂದು ನಾಲ್ಕು ಪ್ರೌಢಶಾಲೆಗಳಲ್ಲಿ ಸುಮಾರು 650 ವಿದ್ಯಾರ್ಥಿಗಳನ್ನು ಇಂಗು ಗುಂಡಿ ನಿರ್ಮಿಸುವಂತೆ ಪ್ರೇರೇಪಿಸಲು ಸಾಧ್ಯವಾಯಿತು. ಎಲ್ಲಾ ಕಡೆಗಳಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಮಕ್ಕಳು ಇಂಗು ಗುಂಡಿ ನಿರ್ಮಿಸಲು ಸ್ವಯಂ ಪ್ರೇರಣೆ ಹೊಂದಿದ್ದಾರೆ.

ಕುಕ್ಕುಜಡ್ಕದ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೂ ಸೇರಿ 130 ಮಂದಿ ಇದ್ದರು.

ಎಲಿಮಲೆ ಜ್ಞಾನದೀಪ ಪ್ರೌಢಶಾಲೆಯಲ್ಲಿ 250 ವಿದ್ಯಾರ್ಥಿಗಳು, ಎಲಿಮಲೆಯ ಸರಕಾರಿ ಪ್ರೌಢಶಾಲೆಯಲ್ಲಿ 190 ವಿದ್ಯಾರ್ಥಿಗಳು ಹಾಗೂ ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ 100 ವಿದ್ಯಾರ್ಥಿಗಳು ನೀರಿಂಗಿಸುವ ಬಗ್ಗೆ ಅರಿವು ನೀಡಲಾಯಿತು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror