ಬೆಂಗಳೂರು/ಸುಳ್ಯ: ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕರವೇಯ 13 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಬೆಳಿಗ್ಗೆ ಬೆಂಗಳೂರು ವಿವಿ ಪುರಂ ಪೋಲೀಸರಿಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರು ಹಾಗೂ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವ ಐಎಂಎ ಮುಷ್ಕರ ವಾಪಾಸ್ ಪಡೆದಿದ್ದು ವೈದ್ಯಕೀಯ ಸೇವೆ ಆರಂಭಗೊಂಡಿದೆ.
Advertisement
ವೈದ್ಯರಿಗೆ ಹಲ್ಲೆ ನಡೆಸಿದವರನ್ನು ಬಂಧಿಸಿದ ತಕ್ಷಣವೇ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದೇವೆ. ಕನ್ನಡ ಸಂಘದ ಕಾರ್ಯಕರ್ತರನ್ನು ಪೋಲೀಸರು ಬಂಧಿಸಿದ್ದಾರೆ. ನಮಗೆ ಭದ್ರತೆ ಒದಗಿಸಲಾಗುವುದು ಎಂದು ಸರಕಾರ ಭರವಸೆ ನೀಡಿದೆ. ಆ ಎಲ್ಲಾ ಕಾರಣಗಳಿಂದ ನಾವು ಮುಷ್ಕರವನ್ನು ಕೈಬಿಟ್ಟಿದ್ದೇವೆ ಎಂದು ಕಿರಿಯ ವೈದ್ಯರ ಸಂಘದ ಅಧ್ಯಕ್ಷ ಎಲ್.ಎನ್. ರೆಡ್ಡಿ ಹೇಳಿದ್ದಾರೆ.ಇದೀಗ ವೈದ್ಯರ ಮುಷ್ಕರ ಅಂತ್ಯವಾಗಿದ್ದು ರಾಜ್ಯಾದ್ಯಂತ ಒಪಿಡಿ ಸೇವೆ ಪುನಾರಂಭವಾಗಿದೆ ಎಂದು ವೈದ್ಯರ ಸಂಘ ತಿಳಿಸಿದೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement