ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ.
Advertisement
ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ 502 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಆಫ್ರಿಕಾ 431 ರನ್ ಗಳಿಗೆ ಆಲೌಟ್ ಆಯಿತು. ನಂತರ 71 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 323 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು ಆಫ್ರಿಕಾಗೆ 395 ರನ್ ಗಳ ಗುರಿ ನೀಡಿತ್ತು. ಕೊನೆಯ ದಿನ ಈ ಬೃಹತ್ ಮೊತ್ತ ಬೆನ್ನಟ್ಟಿದ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್ ಗಳು ಶಾಕ್ ನೀಡಿದರು. ಕೇವಲ 191 ರನ್ ಗಳಿಗೆ ಆಫ್ರಿಕಾ ತಂಡವನ್ನು ಆಲೌಟ್ ಮಾಡಿದ್ದು ಇದರೊಂದಿಗೆ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement