ಸುಳ್ಯ. ವಿದ್ಯಾರ್ಥಿಗಳಲ್ಲಿ ಮೊಬೈಲ್ ಮತ್ತು ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಶಾಲಾ, ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ. ಈ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರು ಸಹಾಯಕ ಕಮಿಷನರ್ ಹೆಚ್.ಕೆ.ಕೃಷ್ಣಮೂರ್ತಿ ಹಾಗೂ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಭೇಟಿ ನೀಡಿ ಮಾದಕವಸ್ತುಗಳ ಬಳಕೆ, ಮೊಬೈಲ್ ಬಳಕೆಯಿಂದ ದೂರ ಇರುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
Advertisement
ಅಂಗಡಿಗಳಲ್ಲಿ ಮೊಬೈಲ್ ಇರಿಸಿದರೆ ಕ್ರಮ:
Advertisement
ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಶಾಲಾ ಕಾಲೇಜುಗಳ ಸಮೀಪದ ಅಂಗಡಿಗಳಲ್ಲಿ ಇರಿಸಿದರೆ ಅಂಗಡಿ ಮಾಲಿಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಹಾಯಕ ಕಮೀಷನರ್ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಪೊಲೀಸರು ಅಂಗಡಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement