ಯಶಸ್ವೀ ಎಸ್.ಎಸ್.ಎಲ್.ಸಿ.‌ ಪರೀಕ್ಷೆ: ಡಿಸಿ ಅಭಿನಂದನೆ

July 3, 2020
8:13 PM

ಮಂಗಳೂರು: ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿರುವುದಕ್ಕೆ ಜಿಲ್ಲಾಧಿಕಾರಿ ಸಿಂಧೂ. ಬಿ. ರೂಪೇಶ್ ಅಭಿನಂದನೆ ಸಲ್ಲಿಸಿದ್ದಾರೆ.

ಕೋವಿಡ್ ಆತಂಕದ ನಡುವೆಯೂ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ, ಉತ್ಸಾಹದಿಂದ ಆಗಮಿಸಿ ಪರೀಕ್ಷೆ ಬರೆದಿದ್ದಾರೆ. ಪಾಲಕರೂ ತಮ್ಮ ಮಕ್ಕಳಿಗೆ ಪರೀಕ್ಷೆ ಬರೆಯಲು ಧೈರ್ಯ ತುಂಬಿದ್ದಾರೆ. ಕೇರಳ ರಾಜ್ಯದ ವಿದ್ಯಾರ್ಥಿಗಳು ಜಿಲ್ಲಾಡಳಿತ ಒದಗಿಸಿದ ಸಾರಿಗೆ ಸೌಲಭ್ಯ ಬಳಸಿಕೊಂಡು, ಪರೀಕ್ಷೆಗೆ ಉತ್ಸಾಹದಿಂದ ಆಗಮಿಸಿದ್ದಾರೆ.

ಯಾವುದೇ ಗೊಂದಲಗಳಿಲ್ಲದೇ ಸಾಮಾಜಿಕ ಅಂತರದೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪರೀಕ್ಷೆಗೆ ಸಹಕರಿಸಿದ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿ ಸಿಬ್ಬಂದಿಗಳು, ಶಾಲಾ ಆಡಳಿತ ಮಂಡಳಿಗಳಿಗೆ, ವಾಹನ ಚಾಲಕರಿಗೆ ಜಿಲ್ಲಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror