ಯುವಕರು ನವಭಾರತದ ನಿರ್ಮಾಣಕ್ಕೆ ಸಹಕರಿಸಬೇಕು – ತೇಜಸ್ವಿ ಸೂರ್ಯ

October 15, 2019
8:06 PM

ಪುತ್ತೂರು:ಭಾರತವು ಒಂದು ಬದಲಾವಣೆಯ ಕಾಲಘಟ್ಟದಲ್ಲಿ ಬಂದು ನಿಂತಿದೆ. ನವ ಭಾರತದ ನಿರ್ಮಾಣಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅದರಲ್ಲಿ ಇಂದಿನ ಯುವಜನತೆ ನವಭಾರತದ ನಿರ್ಮಾಣಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಯುವ ಸಂಸದ  ತೇಜಸ್ವಿ ಸೂರ್ಯ ಹೇಳಿದರು.

Advertisement
Advertisement
Advertisement
Advertisement

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಕಾಲೇಜಿನ ಸಹಯೋಗದಲ್ಲಿ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆದ ‘ಯೂತ್-ವಿಷನ್-ನೇಶನ್’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಅನೇಕ ಒಳ್ಳೆಯ ಬದಲಾವಣೆಗಳು ಆಗುತ್ತಿವೆ. ಸ್ವಚ್ಛ ಭಾರತದಂತಹ ಪರಿಕಲ್ಪನೆಗಳು ದೇಶದಲ್ಲಿ ಕ್ರಾಂತಿಯನ್ನು ಉಂಟುಮಾಡುತ್ತಿವೆ. ನರೇಂದ್ರ ಮೋದಿಯವರ ಇಂತಹ ಅನೇಕ ಯೋಜನೆಗಳು ದೇಶದಲ್ಲಿ ಬದಲಾವಣೆಯನ್ನು ತರುತ್ತಿದೆ.ಆದ್ದರಿಂದ ಯುವಜನತೆ ಈ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.ಆಗ ಮಾತ್ರದೇಶ ಸದೃಢವಾಗಲು ಸಾಧ್ಯಎಂದರು. ಕಾಶ್ಮೀರದಲ್ಲಿ ಜಾರಿಯಲ್ಲಿ ಇದ್ದ ಸಾಂವಿಧಾನಿಕ 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ಮತ್ತೊಂದು ಬದಲಾವಣೆಯನ್ನು ಕೇಂದ್ರ ಸರಕಾರ ಮಾಡಿದೆ.ಇದರಿಂದ ಕಾಶ್ಮೀರದಲ್ಲಿ ಅಬಿವೃದ್ದಿಯ ಪಥ ಶುರುವಾಗಿದೆ.ಇತಿಹಾಸದ ಅನೇಕ ತಪ್ಪುಗಳಿಂದಾಗಿ 370ನೇ ವಿಧಿ ಶುರುವಾಯಿತು. ಅದರಅಂತ್ಯವಾಗಿದೆ. ಎಂದು ಹೇಳಿ 370ನೇ ವಿಧಿಯಕುರಿತು ಸವಿವರವಾಗಿ ಮಾಹಿತಿ ನೀಡಿದರು.

Advertisement

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಕಾಲೇಜಿನ ಅಧ್ಯಕ್ಷರಾದ ಗಣೇಶ್‍ಜೋಷಿ, ಸಂಚಾಲಕರಾದ ವಿಜಯನಾರಾಯಣ ಕೆ.ಎಂ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ  ಅರವಿಂದ್ ವಳಕಟ್ಟೆ ಸ್ವಾಗತಿಸಿ, ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ.ರವೀಂದ್ರ ವಂದಿಸಿದರು. ಕಾನೂನು ಕಾಲೇಜಿನ ಉಪನ್ಯಾಸಕರಾದ  ಕುಮಾರ್‍ಎಸ್. ಕಾರ್ಯಕ್ರಮ ನಿರೂಪಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror