ಯುವಕರು ರಾಷ್ಟ್ರ ನಿರ್ಮಾಣದ ಕುರಿತು ಚಿಂತಿಸಿ: ಡಾ. ಕಲ್ಲಡ್ಕ ಪ್ರಭಾಕರ ಭಟ್

September 8, 2019
8:00 PM

ಪುತ್ತೂರು: ರಾಷ್ಟ್ರದ ಸಂಪತ್ತು ಎಂದರೆ ಯುವಕರು. ಈ ಯುವ ಸಂಪತ್ತು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಅವರಿಗೆ ಸರಿಯಾಗಿ ದಾರಿ ತೋರಿಸುವ ಕೆಲಸವಾಗಬೇಕಿದೆ. ಏಕೆಂದರೆ ಯುವಕರು ವೃತ್ತಿಯ ಮೂಲಕ ಹಣ ಸಂಪಾದಿಸುವ ಹಿಂದೆ ಬಿದ್ದಿದ್ದಾರೆ. ಅದರ ಬದಲು ಜೀವನ ಮೌಲ್ಯಗಳನ್ನು ಅಳವಡಿಸುವ ಮುಖೇನ ಒಗ್ಗಟ್ಟಿನಿಂದ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ತಿಳಿಸಿದರು.

Advertisement
Advertisement
Advertisement
Advertisement
Advertisement

ಅವರು ನೆಹರೂನಗರದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ವಿವೇಕಾನಂದ ಪದವಿ, ವಿವೇಕಾನಂದ ಕಾನೂನು ಕಾಲೇಜು, ವಿವೇಕಾನಂದ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಆಶ್ರಯದಲ್ಲಿ ಕರ್ನಾಟಕ ಫೋರಂ ಫಾರ್ ಇಂಟಗ್ರೆಟೆಡ್ ನ್ಯಾಶನಲ್ ಸೆಕ್ಯುರಿಟಿ ಸಹಯೋಗದಲ್ಲಿ ‘ಏಲಿಯನೇಶನ್ ಆಫ್ ಯೂತ್ ಆ್ಯಂಡ್ ಸೊಲ್ಯುಷನ್ಸ್’ ಎಂಬ ವಿಷಯದ ಕುರಿತ ‘ಸುಪಥ’ ರಾಜ್ಯಮಟ್ಟದ ವಿಚಾರಸಂಕಿರಣವನ್ನು ಉದ್ಘಾಟಿಸಿ  ಮಾತನಾಡಿದರು. ರಾಷ್ಟ್ರದ ಬಹುಸಂಖ್ಯೆಯ ತರುಣರು ತಮ್ಮ ಚಿಂತನೆ, ಯೋಚನೆ, ಶಕ್ತಿಯನ್ನು ಸಂಸ್ಕಾರ, ಸಂಸ್ಕೃತಿ ಹಾಗೂ ಜೀವನ ಮೌಲ್ಯಗಳ ಮುಖೇನ ರಾಷ್ಟ್ರದ ಅಭಿವೃದ್ಧಿಯ ಕುರಿತು ಯೋಚಿಸುವ ಕಾರ್ಯ ಯುವಜನತೆ ಮಾಡಬೇಕು. ಮಾತ್ರವಲ್ಲದೆ ಯುವಕರು ತಮ್ಮ ಗುರಿಯನ್ನು ರಾಷ್ಟ್ರಕ್ಕೆ ಹೆಸರು ತರುವಂತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Advertisement

ಬೆಂಗಳೂರಿನ ಹಿರಿಯ ವಕೀಲ, ಫೋರಂ ಫಾರ್ ಇಂಟಗ್ರೆಟೆಡ್ ನ್ಯಾಶನಲ್ ಸೆಕ್ಯುರಿಟಿಯ ರಾಷ್ಟ್ರೀಯ ಕಾರ್ಯದರ್ಶಿ ವಿ. ಎಸ್. ಹೆಗ್ಡೆ ಮಾತನಾಡಿ, ದೇಶ ನಿರ್ಮಾಣದಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ. ಹಾಗಾಗಿ ದೇಶದಲ್ಲಿ ನಡೆಯುತ್ತಿರುವ ಪ್ರತಿಯೊಂದು ಘಟನೆಯನ್ನು ಅವಲೋಕಿಸಬೇಕು ಏಕೆಂದರೆ ಪ್ರತಿ ಕ್ಷೇತ್ರದಲ್ಲಿ ಯುವಕರು ಕೆಲಸ ನಿರ್ವಹಿಸುತ್ತಿರುವುದರಿಂದ ಈ ಬಗ್ಗೆ ಗಂಭೀರ ಚಿಂತನೆಯನ್ನು ಮಾಡಬೇಕು ಎಂದು ತಿಳಿಸಿದರು.

ಭಾರತ ಸರಕಾರದ ನಿವೃತ್ತ ಕಾರ್ಯದರ್ಶಿ ಹಾಗೂ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ಕಾರ್ಯಾಧ್ಯಕ್ಷ ವಿ. ವಿ ಭಟ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಬಿಎಡ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಎ.ವಿ.ನಾರಾಯಣ, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ ಭಟ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳಾದ ಜಯಂತಿ ನಾಯ್ಕ್, ಕೃಷ್ಣ ನಾಯ್ಕ್, ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಅಧಿಕಾರಿ ವೆಂಕಟೇಶ್, ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿಜಯ ಕಾರಂತ ಗಣಪತಿ ಉಪಸ್ಥಿತರಿದ್ದರು.

Advertisement

ವಿದ್ಯಾರ್ಥಿನಿ ಮೇಘನಾ ಪ್ರಾರ್ಥಿಸಿದರು. ವಿವೇಕಾನಂದ ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಅಯ್ಯರ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ
March 6, 2025
11:05 PM
by: The Rural Mirror
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ
March 6, 2025
10:58 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |
March 6, 2025
10:53 PM
by: ದ ರೂರಲ್ ಮಿರರ್.ಕಾಂ
ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
March 6, 2025
10:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror