ಸುಳ್ಯ: ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಿತು.
ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸುಬ್ರಮಣಿ ಕಲ್ಲುಗುಂಡಿಯವರನ್ನು ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.
ಕಳಂಜ ಯುವಕ ಮಂಡಲ, ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಮತ್ತು ಯುವಜನ ಸಂಯುಕ್ತ ಮಂಡಳಿಗೆ ಅನುದಾನ ಒದಗಿಸಿದ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಸನ್ಮಾನ ನೆರವೇರಿಸಿದರು. ಯುವಕರು ನಾಡಿನ ಆಸ್ತಿ. ಸಾಧಕರನ್ನು ಸನ್ಮಾನಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿದ ಮಂಡಳಿ ಕಾರ್ಯ ಮಾದರಿಯಾದುದು ಎಂದು ಅವರು ಹೇಳಿದರು.
ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು. ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅತಿಥಿಯಾಗಿದ್ದರು.
ಗೌರವಾಧ್ಯಕ್ಷ ಚಂದ್ರಶೇಖರ ಪನ್ನೆ ಸ್ವಾಗತಿಸಿ, ನೂತನ ಅಧ್ಯಕ್ಷ ಶಂಕರ್ ಪೆರಾಜೆ ವಂದಿಸಿದರು. ನಿರ್ದೇಶಕ ರಮೇಶ್ ಮೆಟ್ಟಿನಡ್ಕ ಆಶಯಗೀತೆ ಹಾಡಿದರು. ನಿರ್ದೇಶಕ ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.