ಬೆಂಗಳೂರು: ರಾಜ್ಯ ಸರಕಾರದ ಉಳಿಯುತ್ತೋ… ? ಬೀಳುತ್ತೋ…? ಹೀಗೊಂದು ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗಲಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದು, ಬಳಿಕ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ. ಇಂದಿನ ಸದನ ಕಲಾಪ ವೀಕ್ಷಣೆಗೆ ರಾಜ್ಯಪಾಲರ ಕಚೇರಿಯಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಎಲ್ಲಾ ಕಲಾಪಗಳನ್ನು ವೀಕ್ಷಣೆ ಮಾಡಿ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ನೀಡಿದ್ದಾರೆ, ಇಬ್ಬರು ಪಕ್ಷೇತರರು ಬೆಂಬಲ ವಾಪಸ್ ಪಡೆದಿದ್ದಾರೆ. ಹೀಗಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ಸರಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಯುತ್ತಿದೆ.
ವಿಧಾನಸೌಧದ ಸುತ್ತ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ. ಅಗ್ನಿ ಶಾಮಕ ದಳ, ವಾಟರ್ ಜೆಟ್, ಮೀಸಲು ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel