ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಪಾಸಿಟಿವ್ ಪ್ರಕರಣ ಹೆಚ್ಚಿದ ಸುದ್ದಿ ಒಂದು ಕ್ಷಣದ ಆತಂಕವಲ್ಲ, ಎಲ್ಲೆಡೆ ಕ್ವಾರಂಟೈನ್ ನಲ್ಲಿದ್ದವರಲ್ಲೇ ಪಾಸಿಟಿವ್ ಬರುತ್ತದೆ ಎಂದು ಸಮಾಧಾನವೂ ಅಲ್ಲ. ಇನ್ನಷ್ಟು ಜಾಗೃತಿ ಅಗತ್ಯ ಎನ್ನುವುದರ ಸೂಚನೆ ಇದು. ರಾಜ್ಯದಲ್ಲಿ ಒಮದೇ ದಿನ 87 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ.
ಮಂಗಳೂರು: ಸೋಮವಾರ ರಾಜ್ಯದಲ್ಲಿ ಕೊರೊನಾ ವೈರಸ್ 187 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಮತ್ತೊಂದು ಬಲಿಯಾಗಿದೆ. ದ.ಕ. ಉಡುಪಿ ಜಿಲ್ಲೆಗಳಲ್ಲಿ 77 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಪೈಕಿ ದ.ಕ. ಜಿಲ್ಲೆಯಲ್ಲಿ 4 ಹಾಗೂ ಉಡುಪಿಯಲ್ಲಿ 73 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಸೋಂಕಿತರ ಪೈಕಿ ಹೆಚ್ಚಿನವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದು, ಕ್ವಾರಂಟೈನ್ ನಲ್ಲಿದ್ದರು ಎಂಬುದು ಈಗಿನ ಮಾಹಿತಿ. ಅದರಲ್ಲೂ ಕೆಲವು ವ್ಯಕ್ತಿಗಳಿಗೆ ಕೊರೊನಾ ಪಾಸಿಟಿವ್ ಬಂದ ಮೂಲ ಹೇಗೆ ಎಂಬುದು ತಿಳಿದಿಲ್ಲ. ಇದು ಎಚ್ಚರಿಕೆಯನ್ನು ನೀಡಿದೆ. ಸಾಮಾಜಿಕ ಅಂತರ , ಸ್ಯಾನಿಟೈಸರ್ ಬಳಕೆ ಸೇರಿದಂತೆ ಸ್ವಯಂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಸೂಚಿಸುತ್ತದೆ.
ಕಟ್ಟುನಿಟ್ಟಿನ ಕ್ರಮ:
ಇದೀಗ ದ ಕ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಕೇಂದ್ರ ಸರಕಾರ ಲಾಕ್ಡೌನ್ ಜೂ.31 ರವರೆಗೆ ಘೋಷಣೆ ಮಾಡಿದೆ. ಹೀಗಾಗಿ ಈ ಅವಧಿಯಲ್ಲಿ ಲಾಕ್ಡೌನ್ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ. ರಾತ್ರಿ ಸಂಚಾರ ಕಡ್ಡಾಯವಾಗಿ ನಿಷೇಧಿಸಿದ್ದು ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ಕರ್ಪ್ಯೂ ವಿಧಿಸಲಾಗಿದೆ. ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ನಗರ ಪ್ರದೇಶಗಳಲ್ಲಿ 200 ರೂ ದಂಡ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ.