ಮಂಗಳೂರು/ಕೊಡಗು: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಮಳೆಯ ಕಾರಣದಿಂದ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಕುಮಾರಧಾರಾ, ನೇತ್ರಾವತಿ ನದಿ ನೀರಿನಮಟ್ಟ ಏರಿಕೆ ಕಂಡುಬಂದರೆ ಕೊಡಗಿನ ಜೀವನದಿ ಕಾವೇರಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಾವೇರಿಯ ಉಗಮಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಗುರುವಾರದಿಂದ ಉತ್ತಮ ಮಳೆಯಾಗುತ್ತಿದ್ದು ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಹೀಗಾಗಿ ಕುಮಾರಧಾರಾ, ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಇದೇ ವೇಳೆ ಕೊಡಗಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಡಿಕೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ.ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳ ಹರಿವಿನ ಮಟ್ಟವೂ ಏಕಾಏಕಿ ಹೆಚ್ಚಳವಾಗಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.
ಹೈದರಾಬಾದ್-ಕರ್ನಾಟಕ ಭಾಗದಲ್ಲೂ ಮಳೆ ಸುರಿಯ ತೊಡಗಿದೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭೀಮಾ ನದಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement