ರಾಮಚಂದ್ರಾಪುರ ಮಠದಿಂದ ಸಂತ್ರಸ್ತರ ಪರಿಹಾರ ಕೇಂದ್ರ

August 11, 2019
8:30 AM

ಬೆಂಗಳೂರು: ಭೀಕರ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಶ್ರೀರಾಮಚಂದ್ರಾಪುರ ಮಠ ಸಹಾಯಹಸ್ತ ಚಾಚಿದ್ದು, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಬಳಿ ಇರುವ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಸ್ವ-ಇಚ್ಛೆಯಿಂದ ಆರಂಭಿಸಿದೆ.
ಯಾವುದೇ ಸರಕಾರಿ ನೆರವು ಅಥವಾ ಪ್ರತಿಫಲಾಪೇಕ್ಷೆ ಇಲ್ಲದೇ ತನ್ನ ಕರ್ತವ್ಯ ಎಂದು ಭಾವಿಸಿ ಈ ಕೇಂದ್ರ ಆರಂಭಿಸಲಾಗುತ್ತಿದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

(File Photo)

ಗಿರಿನಗರದ ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿರುವ ಅವರು, ಶನಿವಾರ ಆಶೀರ್ವಚನದಲ್ಲಿ ಈ ವಿಷಯ ಪ್ರಕಟಿಸಿದರು.

ರಾಜ್ಯದ ಜನ ಭೀಕರ ಪ್ರವಾಹದಿಂದ ತತ್ತರಿಸಿದ್ದು, ಇದು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಕ್ಕೆ ಧುಮುಕಬೇಕಾದ ಸಮಯ; ನೊಂದವರ ಬದುಕನ್ನು ಕಟ್ಟಿಕೊಡಲು, ನಮ್ಮ ಸಂಪಾದನೆಯ ಒಂದಿಷ್ಟು ಮೊತ್ತವನ್ನು ಸಮರ್ಪಿಸಬೇಕಾದ ಹೊತ್ತು. ಆದ್ದರಿಂದ ಶ್ರೀಮಠ ಈ ಮಾನವೀಯ ಕಾರ್ಯಕ್ಕೆ ಮುಂದಾಗಿದೆ ಎಂದು ವಿವರಿಸಿದರು.

“ಗೋಸ್ವರ್ಗದಲ್ಲಿ ಸಾವಿರಾರು ಮಂದಿಗೆ ಆಶ್ರಯ ನೀಡಲು ಮತ್ತು ಊಟೋಪಚಾರಕ್ಕೆ ವ್ಯವಸ್ಥೆಯಿದ್ದು, ಪ್ರವಾಹ ಸಂತ್ರಸ್ತರು ಉಚಿತವಾಗಿ ಇದನ್ನು ಬಳಸಿಕೊಳ್ಳಬಹುದು. ಗೋಸ್ವರ್ಗ, ನೆರೆ ಸಂತ್ರಸ್ತರ ಪಾಲಿಗೂ ಸ್ವರ್ಗವಾಗಬೇಕು ಎನ್ನುವುದು ನಮ್ಮ ಬಯಕೆ” ಎಂದು ಸ್ಪಷ್ಟಪಡಿಸಿದರು.
ಪ್ರವಾಹ ಸಂತ್ರಸ್ತರಿಗೆ ಇನ್ನೂ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬ ಬಗ್ಗೆ ಚಿಂತನೆ ನಡೆದಿದೆ ಎಂದರು.

 

Advertisement

ಪರಿಹಾರ ಸಾಮಾಗ್ರಿ ಸಂಗ್ರಹಕ್ಕೆ ಕೂಡಾ ಶ್ರೀಮಠ ವ್ಯವಸ್ಥೆ ಮಾಡಿದೆ. ಮಂಗಳೂರಿನ ನಂತೂರು ಶ್ರೀಭಾರತೀ ಸಮೂಹಸಂಸ್ಥೆಯ ಸೇವಾಸಮಿತಿ ಕಚೇರಿ, ಮಾಣಿಮಠ ಕಚೇರಿ, ಉತ್ತರ ಕನ್ನಡ ಜಿಲ್ಲೆಯ ಕೆಕ್ಕಾರು ಮಠ ಕಚೇರಿ, ಅಪ್ಸರಕೊಂಡ ಮಠದ ಕಚೇರಿ, ಬಾನ್ಕುಳಿ ಗೋಸ್ವರ್ಗ ಆವರಣದಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಸಂತ್ರಸ್ತರಿಗೆ ವಿತರಿಸಲಾಗುತ್ತದೆ.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು
December 17, 2025
7:02 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror