ರಾಷ್ಟ್ರಮಟ್ಟ ತಲುಪಿದ ಕಂಬಳ ಓಟಗಾರ ಶ್ರೀನಿವಾಸ್ ಗೌಡ

February 16, 2020
7:22 PM

ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಯುವಕ ಶ್ರೀನಿವಾಸಗೌಡ ಅವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
Advertisement

ಉಪರಾಷ್ಟ್ರಪತಿಗಳ ಅಧಿಕೃತ ಟ್ವೀಟ್ ಖಾತೆಯಿಂದ ಬರೆದಿರುವ ವೆಂಕಯ್ಯ ನಾಯ್ಡು, ‘ಕಂಬಳ ಕ್ರೀಡೆಯಲ್ಲಿ ಅಪರೂಪದ ಸಾಧನೆ ಮಾಡಿರುವ ಹಾಗೂ ಉಸೇನ್ ಬೋಲ್ಟ್ ಅವರ ಸಾಧನೆಯೊಂದಿಗೆ ಹೋಲಿಕೆಯಾಗುತ್ತಿರುವ ಶ್ರೀನಿವಾಸ್ ಗೌಡ ಅವರಿಗೆ ಅಭಿನಂದನೆಗಳು. ದೇಶದಲ್ಲಿ ಸುಪ್ತವಾಗಿರುವ ಹಲವಾರು ಪ್ರತಿಭೆಗಳಿವೆ. ಅದನ್ನು ಗುರುತಿಸಿ, ಪೋಷಿಸಿ ಸಂಪೂರ್ಣವಾದ ಸಾಮರ್ಥ್ಯವನ್ನು ಹೊರತರುವ ಅಗತ್ಯವಿದೆ’ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಅಲ್ಲದೆ ಶ್ರೀನಿವಾಸರ ಪ್ರತಿಭೆಯನ್ನು ಗುರುತಿಸಿ, ಒಲಿಂಪಿಕ್ಸ್ ಗೆ ಅವರ ಕೌಶಲವನ್ನು ಅಣಿಗೊಳಿಸಲು ತರಬೇತಿ ನೀಡುವುದಾಗಿ ತಿಳಿಸಿರುವ ಕೇಂದ್ರ ಕ್ರೀಡಾ ಸಚಿವ ಕಿರೆಣ್ ರಿಜಿಜು ಅವರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ಕರೆ (ಕಂಬಳ ಕೋಣಗಳ ಟ್ರ್ಯಾಕ್) ಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗುತ್ತಿದೆ.

Advertisement

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |
July 23, 2025
7:03 AM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |
July 23, 2025
6:49 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group