ಸುಳ್ಯ: ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2019-20ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಆಗಸ್ಟ್ 24ರಂದು ನಡೆಯಿತು. ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕಿವಿಮಾತು ಹೇಳುವುದರೊಂದಿಗೆ ವಿದ್ಯಾರ್ಥಿ ಜೀವನದಲ್ಲಿ ಸ್ವಯಂಸೇವಕಿಯಾಗಿ ತಮ್ಮ ಅನುಭವವನ್ನು ಅವರು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಯುತ ಪೂಜಾರಿ ಕೆ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ಡಾ. ಜಯಶ್ರೀ ಕೆ. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳು ಉಪಸ್ಥಿತರಿದ್ದರು.
Advertisement
ಕಾರ್ಯಕ್ರಮಾಧಿಕಾರಿಗಳಾದ ಧನರಾಜ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಖಾ ಹೆಚ್. ವಂದಿಸಿದರು. ಘಟಕದ ನಾಯಕಿ ಪ್ರಸನ್ನ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement