ಸುಳ್ಯ: ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸೆ. 21ರಂದು ಹಮ್ಮಿಕೊಂಡ ರೋಟರಿ ರೈಡರ್ ಮೇನಿಯಾ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣೆಯ ಕುರಿತು ಮಾಹಿತಿ ನೀಡುವ ಕುರಿತಾದ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ರೊ. ಭಾನುಪ್ರಕಾಶ್ ವಹಿಸಿದ್ದರು.
Advertisement
ಸಭೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಪರಿಸರವಾದಿ, ಮಲೆನಾಡು ಪರಿಸರ ಸಂರಕ್ಷಣಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಅವರು ಮಾಹಿತಿ ನೀಡಿದರು. ಕ್ಲಬ್ ನ ಸದಸ್ಯರಿಗೆ ಎತ್ತಿನಹೊಳೆ ಹಾಗೂ ಗುಂಡ್ಯ ವಿದ್ಯುತ್ ಘಟಕದ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ವಿವರಣೆಯನ್ನೂ, ಪರಿಸರ ಕಾಳಜಿಯನ್ನು ಪ್ರತಿಯೊಬ್ಬ ಪ್ರಜೆಯಲ್ಲಿ ರೂಪಿಸುವ ಬಗ್ಗೆ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಅಸಿಸ್ಟೆಂಟ್ ಗವರ್ನರ್ ಡಾ. ಕೇಶವ ಪಿ. ಕೆ., ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷ ರೊ. ಪುರುಷೋತ್ತಮ, ರೊ. ಜಿತೇಂದ್ರರವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement