ಲೋಕಾಯುಕ್ತ ಅಧಿಕಾರಿಗಳಿಂದ ಜಲ್ಲೆಯಲ್ಲಿ ಪ್ರವಾಸ : ಅ.23 ರಂದು ಸುಳ್ಯಕ್ಕೆ ಭೇಟಿ

October 15, 2019
8:30 PM

ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ ಹಾಗೂ ಬಂಟ್ವಾಳ ತಾಲೂಕು ಕಚೇರಿ,  ಅ.24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ,  ಅ. 25  ರಂದು ಬೆಳಿಗ್ಗೆ  11 ಗಂಟೆಯಿಂದ ಮಧ್ಯಾಹ್ನ 1  ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡುವರು. ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.

ಅನಾಮಧೇಯ ಅರ್ಜಿಗಳು ಬಂದಲ್ಲಿ  ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ಪೊಲೀಸ್ ಅಧೀಕ್ಷಕರ ಕಚೇರಿ -0824- 2429197,  9448390987, ಪೊಲೀಸ್ ಉಪಾಧೀಕ್ಷಕರ-1 ಕಚೇರಿ-0824-2453420, 8861688100, 9448530051, ಪೊಲೀಸ್ ಉಪಾಧೀಕ್ಷಕರ-2 ಕಚೇರಿ- 0824-2453420, 7026994128,  ಪೊಲೀಸ್ ನಿರೀೀಕ್ಷಕರ ಕಚೇರಿ- 0824-2427237, 9449044377 ನ್ನು ಸಂಪರ್ಕಿಸಬೇಕು ಎಂದು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror