ವಿಕ್ರಂ ಲ್ಯಾಂಡರ್​ ಜತೆ ಸಂಪರ್ಕ ಸಾಧ್ಯವಾಗಿಲ್ಲ: ಇಸ್ರೋ ಅಧ್ಯಕ್ಷ ಶಿವನ್

September 21, 2019
7:32 PM

ಭುವನೇಶ್ವರ: ಚಂದ್ರನ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿದುಕೊಂಡಿದ್ದ ವಿಕ್ರಂ ಲ್ಯಾಂಡರ್​ ಜತೆ ಇದುವರೆಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ವಿಕ್ರಂ ಲ್ಯಾಂಡರ್​ನ 14 ದಿನಗಳ ಜೀವಿತಾವಧಿ ಶನಿವಾರ ಮುಕ್ತಾಯಗೊಂಡಿದೆ. ಹಾಗಾಗಿ ಇಸ್ರೋ ಗಗನಯಾನ ಯೋಜನೆ ಮೇಲೆ ಹೆಚ್ಚಿನ ಒತ್ತು ನೀಡಲಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್​ ತಿಳಿಸಿದ್ದಾರೆ.

Advertisement

ಐಐಟಿ ಭುವನೇಶ್ವರದ 8 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶಿವನ್,​ ಚಂದ್ರಯಾನ 2 ಆರ್ಬಿಟರ್​ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಲ್ಲಿರುವ 8 ಉಪಕರಣಗಳು ತಮ್ಮ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿವೆ. ಚಂದ್ರಯಾನ 2 ಯೋಜನೆ ಶೇ. 98 ರಷ್ಟು ಯಶಸ್ವಿಯಾಗಿದೆ. ಚಂದ್ರಯಾನ 2 ಯೋಜನೆ ಯಶಸ್ವಿಯಾಗಿರುವುದಕ್ಕೆ 2 ಕಾರಣಗಳಿವೆ. ಅದರಲ್ಲಿ ಮೊದಲನೆಯದು ವಿಜ್ಞಾನ ಮತ್ತು ಎರಡನೆಯದು ತಂತ್ರಜ್ಞಾನಗಳ ಪ್ರದರ್ಶನ. ತಂತ್ರಜ್ಞಾನದ ಬಳಕೆಯಲ್ಲಿ ಯಶಸ್ಸಿನ ಪ್ರಮಾಣ ಪೂರ್ಣವಾಗಿದೆ ಎಂದು ತಿಳಿಸಿದರು.

ಇಸ್ರೋದ ಭವಿಷ್ಯದ ಯೋಜನೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಮುಂದಿನ ವರ್ಷ ಗಗನಯಾನ ಯೋಜನೆಯನ್ನು ಯಶಸ್ವಿಗೊಳಿಸುವುದು ನಮ್ಮ ಮುಂದಿನ ಗುರಿ. ಹಾಗಾಗಿ ಮೊದಲಿಗೆ ಲ್ಯಾಂಡರ್​ಗೆ ಏನಾಗಿದೆ? ಅದು ಸಂಪರ್ಕ ಕಡಿದುಕೊಂಡಿದ್ದು ಏಕೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ರಾಷ್ಟ್ರಮಟ್ಟದ ಸಮಿತಿ ಮತ್ತು ಇಸ್ರೋದ ತಜ್ಞರು ವಿಕ್ರಂ ಲ್ಯಾಂಡರ್​ ಸಂಪರ್ಕ ಕಡಿದುಕೊಳ್ಳಲು ಕಾರಣ ಏನು ಎಂಬುದನ್ನು ಹುಡುಕುತ್ತಿದ್ದಾರೆ ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಲೂನಾರ್​ ನೈಟ್​ ಪ್ರಾರಂಭವಾಗಿದೆ. ಇದೇ ಪ್ರದೇಶದಲ್ಲಿ ವಿಕ್ರಂ ಲ್ಯಾಂಡರ್​ ಸೆ. 7 ರಂದು ಇಳಿದಿತ್ತು. ಲೂನಾರ್​ ನೈಟ್​ ಆರಂಭವಾಗಿರುವುದರಿಂದ ಇಲ್ಲಿ ಸೂರ್ಯನ ಬೆಳಕು ತಲುಪುವುದಿಲ್ಲ. ಈ ಹಿನ್ನೆಲೆಯಲ್ಲಿ ವಿಕ್ರಂ ಲ್ಯಾಂಡರ್​ ವಿದ್ಯುತ್​ ಉತ್ಪಾದಿಸಲು ಸಾಧ್ಯವಿಲ್ಲ. ಜತೆಗೆ ಲೂನಾರ್​ ನೈಟ್​ ಸಂದರ್ಭದಲ್ಲಿ ದಕ್ಷಿಣ ಧ್ರುವದಲ್ಲಿ ತಾಪಮಾನ ಮೈನಸ್​ 200 ಡಿಗ್ರಿಗಿಂತ ಕಡಿಮೆಯಾಗುತ್ತದೆ. ಇಷ್ಟು ಕಡಿಮೆ ತಾಪಮಾನದಲ್ಲಿ ಲ್ಯಾಂಡರ್​ನಲ್ಲಿರುವ ಉಪಕರಣಗಳು ಚಳಿಯಿಂದ ನಿಷ್ಕ್ರಿಯಗೊಳ್ಳಲಿವೆ ಎಂದು ಕೆ. ಶಿವನ್​ ಈ ಮೊದಲೇ ತಿಳಿಸಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group