ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದಿಂದ ‘ಪ್ರತಿಭೋತಃ’ ಕಾರ್ಯಕ್ರಮ ಭಾಷೆ ಭಾವನೆಗಳನ್ನು ವ್ಯಕ್ತಪಡಿಸುವ ಮಾಧ್ಯಮ: ಡಾ.ಪೀಟರ್ ವಿಲ್ಸನ್ ಪ್ರಭಾಕರ್

September 29, 2019
10:54 AM

ಪುತ್ತೂರು: ನಮ್ಮ ಜೀವನದಲ್ಲಿ ಭಾಷೆಯ ಸ್ಥಾನ ಮಹತ್ವವಾದುದು. ನಮ್ಮ ಅಗತ್ಯಗಳನ್ನು ಇತರರಿಗೆ ತಿಳಿಸುವುದಲ್ಲಿ ಸಂವಹನ ಎಷ್ಟು ಪ್ರಾಶಸ್ತ್ಯವನ್ನು ಪಡೆಯುತ್ತದೆಯೋ ಅದರಂತೆ ಒಂದು ಭಾಷೆಯ ಅಗತ್ಯವು ನಮಗಿದೆ. ನಮ್ಮ ಭಾವನೆಗಳನ್ನು ಹೇಳಿಕೊಳ್ಳುವುದಕ್ಕೂ ಒಂದು ಮಾಧ್ಯಮವಾಗಿ ಇದು ಕಾರ್ಯ ನಿರ್ವಹಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

Advertisement

ಅವರು ಕಾಲೇಜಿನ ಸಂಸ್ಕೃತ ಸಂಘ ವಿಕಾಸಂ ಹಾಗೂ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ ‘ಪ್ರತಿಭೋತಃ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುವಾರ ಮಾತನಾಡಿದರು.
ಸಾಧನೆಯ ಹಾದಿಯಲ್ಲಿ ಸಾಗುವಾಗ ಅನೇಕ ಕಷ್ಟಗಳು ಎದುರಾಗುತ್ತದೆ. ಈ ಸಂದರ್ಭದಲ್ಲಿ ಯಾರು ಆ ಕಷ್ಟಗಳನ್ನು ಎದುರಿಸಿ ಮುನ್ನಡೆಯುತ್ತಾನೋ ಅವನೇ ನಿಜವಾದ ಸಾಧಕ. ಈ ಸಮಯದಲ್ಲಿ ನಿರೀಕ್ಷೆ ಮತ್ತು ವಾಂಛೆ ಎಷ್ಟು ನಮ್ಮಲ್ಲಿ ಹೆಚ್ಚಾಗಿರುತ್ತದೆಯೋ ಅಷ್ಟು ನಮಗೆ ಒಳ್ಳೆಯದು. ಇದರಿಂದ ಸಾಧನೆಯ ಹಾದಿಯು ಸುಲಭವಾಗಿರುತ್ತದೆ. ಯಾವುದೇ ಚಿಕ್ಕ ವಿಷಯವಾದರೂ ಅಥವಾ ಸಾಧನೆಯೇ ಚಿಕ್ಕದಾಗಿದ್ದರೂ ಕೂಡ ಅದನ್ನು ದೊಡ್ಡ ಸಾಧನೆಯೆಂದು ತಿಳಿಯಬೇಕು, ಇದರಿಂದ ನಮ್ಮ ಆತ್ಮ ವಿಶ್ವಾಸವು ಹೆಚ್ಚಾಗಿ ಇನ್ನೂ ಸಾಧನೆಯಲ್ಲಿ ತೊಡಗಿಸುವಂತೆ ಪ್ರೇರೇಪಿಸುತ್ತದೆ ಎಂದು ಅಭಿಪ್ರಾಯಪಟ್ಟರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ.ಟಿ. ಜಯರಾಮ ಭಟ್ ಮಾತನಾಡಿ, ಪ್ರಾಚೀನ ಭಾಷೆಯಾದ ಸಂಸ್ಕೃತವು ದೇವ ಭಾಷೆ ಎಂದೇ ಪ್ರಸಿದ್ಧವಾಗಿದೆ. ಇಂದಿಗೂ ಆ ಭಾಷೆಯನ್ನು ಗೌರವಿಸುವವರು ಹಾಗೂ ಸಂವಹನ ಮಾಧ್ಯಮವಾಗಿ ಬಳಸುವುದರ ಮೂಲಕ ಒಂದು ಸಂಸ್ಕೃತಿಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ವಿದ್ಯಾರ್ಥಿಗಳು ಈ ಭಾಷೆಯನ್ನು ಹೆಚ್ಚಿನ ಅಧ್ಯಯನಕ್ಕಾಗಿ ಆರಿಸಿಕೊಂಡು ಉತ್ತಮ ಜೀವನವನ್ನು ರೂಪಿಸಬಹುದು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಡಾ. ಎಚ್. ಜಿ. ಶ್ರೀಧರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಕೃತ ಸಂಘದ ಸಂಯೋಜಕ ಡಾ. ಶ್ರೀಶ ಕುಮಾರ್ ಎಂ. ಕೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಸಂಸ್ಕೃತ ಸಂಘದ ಅಧ್ಯಕ್ಷೆ ಸ್ನೇಹಗೌರಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಜಯಶ್ರೀ ಎಂ. ಹಾಗೂ ಆಶಾಲಕ್ಷ್ಮೀ ಪ್ರಾರ್ಥಿಸಿದರು. ಸ್ವಾತಿ ಬಿ. ಸ್ವಾಗತಿಸಿದರು. ಧನ್ಯಶ್ರೀ ಸಿ.ಕೆ. ವಂದಿಸಿ, ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ
August 22, 2025
8:21 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭಾರ್ಗವ ರಾಮ್‌ ಎಸ್
August 22, 2025
8:16 AM
by: ದ ರೂರಲ್ ಮಿರರ್.ಕಾಂ
ಕೊಪ್ಪಳದಲ್ಲಿ ಸಸ್ಯ ಸಂತೆ | 45 ಲಕ್ಷಕ್ಕೂ ಅಧಿಕ ಸಸಿಗಳು ಮಾರಾಟ | ಇಲಾಖೆಯ ಮಾದರಿ ಕಾರ್ಯ |
August 22, 2025
7:57 AM
by: The Rural Mirror ಸುದ್ದಿಜಾಲ
‘ಗಗನ್ಯಾನ್’ಯೋಜನೆ ಶೇ. 80 ರಷ್ಟು ಪರೀಕ್ಷೆಗಳು ಪೂರ್ಣ | ಇಸ್ರೋ
August 22, 2025
7:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group