ವಿವೇಕಾನಂದ ಕಾಲೇಜಿನಲ್ಲಿ 2 ದಿನದ ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಚಾಲನೆ

August 26, 2019
5:00 PM

ಪುತ್ತೂರು: ಪ್ರಪಂಚದಾದ್ಯಂತ ತಂತ್ರಜ್ಞಾನದ ಬೆಳವಣಿಗೆ ತ್ವರಿತಗತಿಯಲ್ಲಾಗುತ್ತಿದೆ, ಇದರಿಂದ ತಾಂತ್ರಿಕ ಕ್ಷೇತ್ರದಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಬಹುದು. ಜೊತೆಗೆಕೌಶಲ್ಯವನ್ನು ವೃದ್ಧಿಸುವ ಮುಖೇನ ಯಾವುದೇ ಕ್ಷೇತ್ರದಲ್ಲಾದರೂ ನುರಿತರಾಗಲು ಸಾಧ್ಯ ಎಂದು ವಿವೇಕಾನಂದ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಡಾ. ಎಂ.ಎಸ್.ಗೋವಿಂದೇಗೌಡ ಹೇಳಿದರು.

Advertisement
Advertisement
Advertisement

ಅವರು ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್‍ನ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಐಟಿ ಸಂಬಂಧಿ ಎರಡು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ  ಮಾತನಾಡಿದರು.ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ತನ್ನ ಅಧಿಪತ್ಯ ಸಾಧಿಸಿದೆ. ಐ.ಒ.ಟಿ. ಮತ್ತು ಮೊಬೈಲ್ ಅಪ್ಲಿಕೇಶನ್ ತಂತ್ರಜ್ಞಾನಗಳು ಜಾಗತಿಕ ಮಟ್ಟದಲ್ಲಿ ವೇಗವಾಗಿ ಬೆಳೆಯುತ್ತಿದೆ. ಇದು ಮನುಷ್ಯ ದಿನನಿತ್ಯ ಮಾಡುವ ಕೆಲಸಗಳನ್ನು ಮಾಡಲು ಶಕ್ತವಾಗಿದೆ, ಜೊತೆಗೆ ಪ್ರಪಂಚದಲ್ಲಿ ಉಂಟಾಗಿರುವ ಕಾರ್ಮಿಕರ ಕೊರತೆ ನೀಗಿಸಲು ಈ ಅಪ್ಲಿಕೇಶನ್‍ಗಳು ಸಹಕರಿಸುತ್ತವೆ. ಆದರೆ ಇದನ್ನು ಸಕಾರಣಕ್ಕಾಗಿ ಮಾತ್ರ ಬಳಸಬೇಕು ಎಂದರು.

Advertisement

ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಂಕರನಾರಾಯಣ ಭಟ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗಿಂತ ಮೊಬೈಲ್ ತಂತ್ರಜ್ಞಾನಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹೀಗಾಗಿ ಶಿಕ್ಷಕರು ಆಧುನಿಕ ವಸ್ತುಗಳ ಬಗೆಗೆ ವಿಶೇಷ ಜ್ಞಾನ ಪಡೆಯುವ ಅವಶ್ಯಕತೆ ಇದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ.ಟಿ. ಜಯರಾಮ್ ಭಟ್ ಮಾತನಾಡಿ, ತಂತ್ರಜ್ಞಾನದ ಕ್ರಾಂತಿಯಿಂದಾಗಿ ಜಗತ್ತಿನಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಜೊತೆಗೆ ಇದರಿಂದ ವಂಚನೆಗೊಳಗಾದ ಪ್ರಕರಣಗಳು ಬೆಳಕಿಗೆ ಬರುತ್ತಿದೆ, ಹೀಗಾಗಿ ವಿದ್ಯಾರ್ಥಿಗಳು ಇದನ್ನು ಸವಾಲಾಗಿ ಸ್ವೀಕರಿಸಿ ಇಂತಹ ಘಟನೆಗಳನ್ನು ತಡೆಯುವ ಪ್ರಯತ್ನಗಳನ್ನು ಮಾಡಬೇಕು ಎಂದರು.ಐ.ಕ್ಯು.ಎ.ಸಿ. ಘಟಕದ ಸಂಯೋಜಕ ಡಾ.ಹೆಚ್.ಜಿ.ಶ್ರೀಧರ್ ಮತ್ತು ಐ.ಟಿ. ಕ್ಲಬ್‍ನ ಸಂಯೋಜಕ ಗುರುಕಿರಣ್ ಭಟ್ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದ ಸಂಯೋಜಕ ಹಾಗೂ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಸುಚಿತ್ರಾ ವಂದಿಸಿದರು. ವಿದ್ಯಾರ್ಥಿನಿಯರಾದ ಲಿಖಿತಾ ಮತ್ತು ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.
.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ
ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ
November 25, 2024
8:07 PM
by: The Rural Mirror ಸುದ್ದಿಜಾಲ
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ
November 25, 2024
8:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror