ವಿವೇಕಾನಂದ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಶಿಬಿರ

September 22, 2019
1:00 PM

ಪುತ್ತೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವಗುಣ ಮುಖ್ಯವಾದುದು. ಏಕೆಂದರೆ ಮುಂದಿನ ವೃತ್ತಿ ಜೀವನದಲ್ಲಿ ಯಾವ ಹುದ್ದೆಯನ್ನು ಪಡೆಯುತ್ತಾರೆ ಎಂಬುವುದನ್ನು ತಿಳಿಯದೆ ಇರುವುದರಿಂದ ಹಾಗೂ ಎಲ್ಲದಕ್ಕೂ ನಾಯಕತ್ವ ಅವಶ್ಯಕವಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕತ್ವಗುಣ ಬೆಳೆಸಿಕೊಳ್ಳಬೇಕು ಎಂದು ಎಂ. ಆರ್. ಪೈ ಫೌಂಡೇಶನ್‍ನ ತರಬೇತುದಾರ ರಾಜೀವ್ ಕುಮಾರ್ ಲಾವ್ ಹೇಳಿದರು.

Advertisement
Advertisement

ಅವರು  ವಿವೇಕಾನಂದ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಹಾಗೂ ಐಕ್ಯುಎಸಿ ಘಟಕ ಸಹಯೋಗದಲ್ಲಿ ನಡೆದ ನಾಯಕತ್ವ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ  ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕು ಮತ್ತು ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಬೇಕು. ಈ ಉದ್ದೇಶದಿಂದ ಎಂ. ಆರ್. ಪೈ ಪೌಂಡೇಶನ್ ಸ್ಥಾಪನೆಯಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಪ್ರಬಂಧ, ನಾಯಕತ್ವವನ್ನು ರೂಪಿಸುವ ಶಿಬಿರಗಳನ್ನು ಮಾಡಲಾಗುತ್ತದೆ ಎಂದು ಹೇಳಿದರು. ನಂತರ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ನಡೆಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಸೇನೆಯಲ್ಲಿ ನಾವು ಉತ್ತಮ ನಾಯಕತ್ವ ಗುಣವನ್ನು ಕಾಣಬಹುದು. ಅಂತೆಯೇ ನಾವು ಕೂಡ ಸಮಾಜದಲ್ಲಿ, ಕುಟುಂಬದಲ್ಲಿ ಇನ್ನೊಬ್ಬರ ಜೊತೆ ಸರಿಯಾದ ರೀತಿಯಲ್ಲಿ ಮಾತನಾಡುವ ಮೂಲಕ ನಾಯಕತ್ವಗುಣವನ್ನು ಬೆಳೆಸಿಕೊಳ್ಳಬೇಕು. ಒಂದು ಉತ್ತಮ ನಾಯಕ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ. ನಾಯಕತ್ವಗುಣ ಇರುವ ವ್ಯಕ್ತಿಯು ಯಾವಾಗಲು ಸರಿಯಾದ ಯೋಚನೆಯನ್ನು ಮಾಡುತ್ತಾನೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಎಂ. ಆರ್.ಪೈ ಫೌಂಡೇಶನನ ತರಬೇತುದಾರ ವಿವೇಕ್ ದತ್ತಾತ್ರೇಯ ಪಾಟ್ಕಿ ಮತ್ತು ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕದ ಸಂಯೋಜಕಿ ರೇಖಾ ಪಿ. ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನಿತಾ ಕಾಮತ್ ಸ್ವಾಗತಿಸಿ, ಗಣಕÀ ವಿಜ್ಞಾನ ವಿಭಾಗದ ಉಪನ್ಯಾಸಕಿ ಜೀವಿತಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಕ್ಷತಾ ಕೆ. ನಿರೂಪಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror