ಮಂಗಳೂರು:- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ , ಶಿಲ್ಪಕಲೆ, ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಅರ್ಹ ನೊಂದಾಯಿತ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Advertisement
ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸುವ ದಿನವನ್ನು ಫೆಬ್ರವರಿ 4 ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement