ಸುಳ್ಯ: ಜಿಲ್ಲಾ ಪಂಚಾಯತಿಯ ಕೈಗಾರಿಕಾ ಇಲಾಖೆಯ ವತಿಯಿಂದ ವೃತ್ತಿ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣಗಳ ಕಿಟ್ ವಿತರಣಾ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಉಪಕರಣಗಳ ಕಿಟ್‍ಗಳನ್ನು ವಿತರಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ, ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೀತಾ ಹೆಚ್, ಖಾದಿ ಮತ್ತು ಗ್ರಾಮೋದ್ಯೋಗ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕ ಮಂಜುನಾಥ ಹೆಗಡೆ ಉಪಸ್ಥಿತರಿದ್ದರು.
ಕಾರ್‍ಪೆಂಟ್ರಿ, ಗಾರೆ ಕೆಲಸ, ಟೈಲರಿಂಗ್, ಕಮ್ಮಾರಿಕೆ ಮತ್ತಿತರ ಕೆಲಸಗಳ ಒಟ್ಟು 33 ಫಲಾನುಭವಿಗಳಿಗೆ ಉಪಕರಣ ಕಿಟ್‍ಗಳನ್ನು ವಿತರಿಸಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel