ವೆಂಕಟ್ರಮಣ ಸೊಸೈಟಿ: ಶೇ.18 ಡಿವಿಡೆಂಡ್ ಘೋಷಣೆ

September 22, 2019
1:44 PM

ಸುಳ್ಯ: ಒಂದು ಕೋಟಿ ರೂ. ನಿವ್ವಳ ಲಾಭ ಪಡೆದಿರುವ ಸುಳ್ಯದ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸದಸ್ಯರಿಗೆ ಶೆ.18 ಡಿವಿಡೆಂಟ್ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ. ವಾರ್ಷಿಕ ಮಹಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಾರ್ಷಿಕ 288 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದೆ.

Advertisement
Advertisement

ಮಾ.31ರ ವೇಳೆಗೆ 10,302 ಸದಸ್ಯರಿದ್ದು, ಇವರಿಂದ ರೂ. 2,46,95,050 ಪಾಲುಬಂಡವಾಳ ಸಂಗ್ರಹಿಸಿರುತ್ತೇವೆ. 65.05 ಕೋಟಿ ರಷ್ಟು ಠೇವಣಿಯನ್ನು ಸಂಗ್ರಹಿಸಿರುತ್ತೇವೆ. ಈ ಸಹಕಾರಿ ವರ್ಷದಲ್ಲಿ ಒಟ್ಟು ರೂ. 52.70 ಕೋಟಿ ಸಾಲವನ್ನು ವಿತರಿಸಿರುತ್ತೇವೆ.
ಸಂಘದಲ್ಲಿ ಒಟ್ಟು ರೂ. 4,12,38,499.40 ರಷ್ಟು ವಿವಿಧ ನಿಧಿಗಳಿದ್ದು, ಸಂಘದ ದುಡಿಯುವ ಬಂಡವಾಳವು ರೂ. 72,06,69,058.93 ರಷ್ಟಾಗಿರುತ್ತದೆ. 2018-19 ನೇ ಸಾಲಿನಲ್ಲಿ ಸಂಘದ ಉತ್ತಮ ಸಾಧನೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಸಾಧನಾಶ್ರೀ ಪ್ರಶಸ್ತಿಯನ್ನು ನೀಡಿ ಸಂಘವನ್ನು ಗೌರವಿಸಿದೆ. ಬೆಳ್ತಂಗಡಿಯಲ್ಲಿ ಪ್ರಕೃತಿ ವಿಕೋಪದಿಂಂದ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಸಂಘದ ವತಿಯಿಂದ ರೂ. 2 ಲಕ್ಷ ಪರಿಹಾರವನ್ನು ವಿತರಿಸಲು ತೀರ್ಮಾನಿಸಿರುತ್ತೇವೆ.

ಸಂಘವು ಪ್ರಸ್ತುತ 11ಶಾಖೆಗಳನ್ನು ಹೊಂದಿದೆ. ಮುಂದೆ ನಿಂತಿಕಲ್ಲು ಮತ್ತು ನೆಲ್ಯಾಡಿಯಲ್ಲು ಶಾಖೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ರೂ. 100 ಕೋಟಿ ಠೇವಣಿ ಸಂಗ್ರಹಿಸಿ ರೂ. 80 ಕೋಟಿಯಷ್ಟು ಸಾಲವನ್ನು ವಿತರಿಸಲು ಸಂಘದ ಆಡಳಿತ ಮಂಡಳಿಯು ಕಾರ್ಯಯೋಜನೆಯನ್ನು ಹಮ್ಮಿಕೊಂಡಿದೆ. ಸಂಘದ ೩ನೇ ಮಹಡಿಯಲ್ಲಿ ವಿಶಾಲವಾದ ಸಭಾಂಗಣವನ್ನು ನಿರ್ಮಿಸಲು ಕೂಡಾ ಚಿಂತನೆಯನ್ನು ನಡೆಸಿರುತ್ತೇವೆ ಎಂದರು.
ಉಪಾಧ್ಯಕ್ಷ ಪಿ.ಎಸ್.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್, ನಿರ್ದೇಶಕರುಗಳಾದ ಪಿ.ಸಿ.ಜಯರಾಮ್, ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ಎನ್.ಎಸ್., ದಿನೇಶ್ ಮಡಪ್ಪಾಡಿ, ಲತಾ ಎಸ್.ಮಾವಾಜಿ, ಜಯಲಲಿತಾ ಕೆ.ಎಸ್. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group