ಮಂಗಳೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವೆನ್ಲಾಕೆ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.
Advertisement
ದೆಹಲಿಯಿಂದ ಆಗಮಿಸಿದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.
Advertisement
ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement