ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ

September 15, 2019
10:30 AM

ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.

ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್‍ರೆಡ್‍ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.

ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.

ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್‍ರೆಡ್‍ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror