ಶತಮಾನದ ಹಿಂದೆಯೇ ಭಾರತೀಯ ಮಹಿಳೆಯ ಶೌರ್ಯ ಪ್ರದರ್ಶಿಸಿದ ಅಬ್ಬಕ್ಕ: ಮುಖ್ಯಮಂತ್ರಿ ಯಡಿಯೂರಪ್ಪ

December 25, 2019
8:42 PM

ಮೂಡಬಿದ್ರೆ: ವೀರರಾಣಿ ಅಬ್ಬಕ್ಕ ಸಾವಿರಾರು ವರ್ಷಗಳ ಹಿಂದೆಯೇ ಫೋರ್ಚುಗೀಸರ ವಿರುದ್ಧ ಹೋರಾಡುವ ಮೂಲಕ ಭಾರತೀಯ ಮಹಿಳೆಯ ಶೌರ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಅವರು ಮೂಡಬಿದ್ರೆಯಲ್ಲಿ ನಡೆಯುತ್ತಿರುವ 17 ನೇ ವರ್ಷದ ಕೋಟಿ ಚೆನ್ನಯ್ಯ ಕಂಬಳದಲ್ಲಿ ವೀರರಾಣಿ ಅಬ್ಬಕ್ಕ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. ಅಂದಿನ ಯುಗದಲ್ಲಿ ಮಹಿಳೆಯೊಬ್ಬರು ದಂಡನಾಯಕತ್ವ ವಹಿಸಿರುವುದು ನಿಜಕ್ಕೂ ಅಪ್ರತಿಮವಾಗಿದೆ. ಅವರ ಪ್ರತಿಮೆ ಸ್ಥಾಪನೆ ಸಂತಸದ ಸಂಗತಿ ಎಂದು ಅವರು ಹೇಳಿದರು. ಕಂಬಳ ಕ್ರೀಡೆ ಉಳಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ. ಕಂಬಳ ನಡೆಸಲು ನ್ಯಾಯಾಲಯದಲ್ಲಿ ಹೋರಾಟ ನಡೆಸಬೇಕಾಗಿ ಬಂತು. ರಾಜ್ಯ ಸರಕಾರ ಇದಕ್ಕೆ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ಮೂಡಬಿದ್ರೆ ತಾಲೂಕಿನ ಸಮಗ್ರ ಅಭಿವೃದ್ಧಿ ಗೆ ಸರಕಾರ ಹೆಚ್ಚಿನ ಅನುದಾನ ನೀಡಲಿದೆ ಎಂದು ಅವರು ಘೋಷಿಸಿದರು.ಇದೇ ಸಂದರ್ಭದಲ್ಲಿ ವೀರರಾಣಿ ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿದರು.
ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಇದ್ದರು. ಶಾಸಕ ಉಮಾನಾಥ ಕೋಟ್ಯಾನ್ ಸ್ವಾಗತಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group