ಶನಿವಾರ ಬೆಳಗ್ಗೆ 10.30ಕ್ಕೆ ಅಯೋಧ್ಯೆ ವಿವಾದದ ತೀರ್ಪು: ದೇಶದೆಲ್ಲೆಡೆ ಬಿಗಿ ಭದ್ರತೆ

November 8, 2019
9:55 PM

ನವದೆಹಲಿ: ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್​ನ ಸಂವಿಧಾನ ಪೀಠ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.

Advertisement
Advertisement

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ಸಂವಿಧಾನ ಪೀಠ ತನ್ನ ತೀರ್ಪು ಪ್ರಕಟಿಸುವ ವಿಷಯವನ್ನು ಸುಪ್ರೀಂಕೋರ್ಟ್​ನ ಮೂಲಗಳು ಖಚಿತಪಡಿಸುತ್ತಲೇ ದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ. ಅಯೋಧ್ಯೆ ನಗರದಲ್ಲಂತೂ 4 ಸಾವಿರಕ್ಕೂ ಹೆಚ್ಚು ಅರೆಮಿಲಿಟರಿ ಪಡೆ ಯೋಧರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.ಅಗತ್ಯಬಿದ್ದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಅಯೋಧ್ಯೆಗೆ ರವಾನಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಅಯೋಧ್ಯೆ ತೀರ್ಪು ಪ್ರಕಟವಾಗುವ ಕಾಲ ಸನ್ನಿಹಿತವಾಗುತ್ತಿರುವಂತೆ ಸಂಭ್ರಮಾಚರಣೆಯ ಹೆಸರಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ಎಚ್ಚರವಹಿಸಬೇಕು ಎಂದು ದೇಶದ ವಿವಿಧ ಮಠಗಳ ಸ್ವಾಮೀಜಿಗಳು, ಮುಸ್ಲಿಂ ಧಾರ್ಮಿಕ ಮುಖಂಡರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡಬಾರದು
July 25, 2025
7:41 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ರಸಗೊಬ್ಬರ, ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಿಲ್ಲ
July 25, 2025
7:36 AM
by: The Rural Mirror ಸುದ್ದಿಜಾಲ
ಮಳೆಗಾಲದಲ್ಲಿ ಡೆಂಗ್ಯು ಹರಡುವ ಸಾಧ್ಯತೆ  – ಎಚ್ಚರಿಕೆ
July 25, 2025
7:32 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ಹಲವೆಡೆ ಮಳೆ – ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ
July 25, 2025
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group