ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಅವರನ್ನು ಸುಳ್ಯ ಶಾಸಕ ಎಸ್.ಅಂಗಾರ ಮತ್ತು ಇತರ ಬಿಜೆಪಿ ಮತ್ತು ಸಂಘ ಪರಿವಾರ ಪ್ರಮುಖರು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಜಿಗುಂಡಿ ಗಣಪತಿ ಭಟ್, ಭಜರಂಗದಳ ಸಂಚಾಲಕ ನಿಕೇಶ್ ಉಬರಡ್ಕ ಮತ್ತಿತರರ ಪ್ರಮುಖರು ರಾಮದಾಸ್ ಅವರನ್ನು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಕೆವಿಜಿ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ಕೆ.ವಿ.ಚಿದಾನಂದ ಅವರ ನೇತೃತ್ವದಲ್ಲಿ ಶಾಸಕ ರಾಮದಾಸ್ ಅವರಿಗೆ ಚಿಕಿತ್ಸೆ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel