ಬೆಂಗಳೂರು: ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳಿಗೆ ರಜೆ ನೀಡುವಂತೆ ರಾಜ್ಯ ಸರಕಾರ ಸೂಚನೆ ನೀಡಿದೆ. ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇದೀಗ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
Advertisement
ಜಾಗತಿಕ ಮಟ್ಟದಲ್ಲಿ ಭೀತಿ ಮೂಡಿಸಿರುವ ಕೊರೊನಾ ವೈರಸ್ ಸೋಂಕು ಇದೀಗ ರಾಜ್ಯಕ್ಕೆ ಬಂದಿದ್ದ ಟೆಕ್ಕಿಯಲ್ಲಿ ಕಂಡು ಬಂದ ಪರಿಣಾಮ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
Advertisement
ವಿದ್ಯಾರ್ಥಿ , ಸಿಬ್ಬಂದಿ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಅವರಿಗೆ ರಜೆ ನೀಡಬೇಕು. ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ ನಂತರವೇ ಶಾಲೆಗೆ ಮರಳಲು ಅನುಮತಿ ನೀಡಬೇಕು. ವಸತಿನಿಲಯಗಳಲ್ಲಿರುವ ವಿದ್ಯಾರ್ಥಿ ಅಥವಾ ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement