ಸಂತ್ರಸ್ತ ಗೋವುಗಳಿಗೆ ರಾಮಚಂದ್ರಾಪುರ ಮಠದ ಗೋಶಾಲೆಗಳಲ್ಲಿ ಉಚಿತ ಪಾಲನೆ

August 16, 2019
8:03 PM

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಗೋವುಗಳ ಉಚಿತ ರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ, ನೆರಿಯ, ಕಕ್ಕಿಂಜೆ, ಮುಂಡಾಜೆ, ಚಾರ್ಮಾಡಿ ಮತ್ತಿತರ ಕಡೆಗಳಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನೂರಾರು ಕುಟುಂಬಗಳ ಬದುಕು ಬೀದಿಗೆ ಬಂದಿದ್ದು, ಅವರು ಸಾಕುತ್ತಿದ್ದ ಗೋವುಗಳು ದಯನೀಯ ಸ್ಥಿತಿಯಲ್ಲಿರುವುದನ್ನು ಮನಗಂಡು ಶ್ರೀರಾಮಚಂದ್ರಾಪುರ ಮಠ ಈ ಘೋಷಣೆ ಮಾಡಿದೆ.

ಈ ಪ್ರದೇಶದಲ್ಲಿ ಬಹಳಷ್ಟು ಮಂದಿ ಪ್ರೀತಿಯಿಂದ ಸಾಕಿದ ಗೋವುಗಳ ಮಾರಾಟಕ್ಕೆ ಮುಂದಾಗಿದ್ದು, ಯಾರೂ ಗೋವುಗಳನ್ನು ಮಾರಾಟ ಮಾಡದಂತೆ ಶ್ರೀಮಠ ಮನವಿ ಮಾಡಿದೆ. ಗೋವುಗಳನ್ನು ಸಾಕಲಾಗದಿದ್ದರೆ, ಶ್ರೀಮಠದ ಗೋಶಾಲೆಗಳಿಗೆ ನೀಡಿದಲ್ಲಿ ಉಚಿತವಾಗಿ ಅವುಗಳನ್ನು ಸಾಕಲಾಗುತ್ತದೆ. ರೈತರು ಪರಿಸ್ಥಿತಿ ಸುಧಾರಿಸಿದ ಬಳಿಕ ತಮ್ಮ ಗೋವುಗಳನ್ನು ಕೊಂಡೊಯ್ಯಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಶ್ರೀಮಠದ ಕಾಮದುಘಾ ಮತ್ತು ಗೋ ಪರಿವಾರ ವತಿಯಿಂದ ಸಂತ್ರಸ್ತ ಪ್ರದೇಶಗಳ ಗೋವುಗಳಿಗೆ ರಕ್ಷಣೆ ನೀಡಲಾಗಿದೆ. ಹಲವಾರು ಕಡೆಗಳಲ್ಲಿ ಗೋವುಗಳಿಗೆ ದಾಸ್ತಾನು ಮಾಡಿದ್ದ ಮೇವು ನೀರುಪಾಲಾಗಿರುವ ಹಿನ್ನೆಲೆಯಲ್ಲಿ ಮೇವು ಇರುವ ಕಡೆಗಳಿಂದ ಖರೀದಿಸಿ ಬಾಗಲಕೋಟೆ ಜಿಲ್ಲೆ ಶಿವಯೋಗ ಮಂದಿರದ ಗೋಶಾಲೆ, ಹಾನಗಲ್ ಗೋಶಾಲೆಗಳಿಗೆ ಮತ್ತು ಚಾರ್ಮಾಡಿ ಪ್ರದೇಶಗಳಲ್ಲಿ ಸಂತ್ರಸ್ತ ಜನರು ಸಾಕುತ್ತಿದ್ದ ಗೋವುಗಳಿಗೆ ಪೂರೈಕೆ ಮಾಡಲಾಗಿದೆ. ಇದರ ಜತೆಗೆ ಶ್ರೀಮಠದ ನೂರಾರು ಸೇವಾಬಿಂದುಗಳು ಶ್ರಮದಾನದ ಮೂಲಕ ಸಂತ್ರಸ್ತರ ಬದುಕು ಕಟ್ಟುವ ಮಾನವೀಯ ಕಾರ್ಯದಲ್ಲಿ ನೆರವಾಗಿದ್ದಾರೆ.

ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ಹಾಗೂ ಶಾಖಾಮಠಗಳಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರವನ್ನು ಆರಂಭಿಸಿ ಸಂತ್ರಸ್ತರಿಗೆ ವಿತರಿಸುವ ಕಾರ್ಯವೂ ಭರದಿಂದ ಸಾಗಿದೆ. ನೆರವು ಅಗತ್ಯವಿರುವ ರೈತರು ವೇಣೂರು ಪರಮೇಶ್ವರ ಭಟ್ (9008167013) ಅವರನ್ನು ಸಂಪರ್ಕಿಸಬಹುದು.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group