ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ – ಎಸ್.ಸುರೇಶ್ ಕುಮಾರ್

August 21, 2019
10:19 PM

ಮಡಿಕೇರಿ :ರಾಜ್ಯದ ಹನ್ನೆರಡು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಪ್ರವಾಹದಿಂದ ಸಾಕಷ್ಟು ಮನೆಗಳು ಹಾನಿಯಾಗಿದೆ. ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಪುನರ್ ವಸತಿ ಕಲ್ಪಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು  ಸಚಿವ ಎಸ್.ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

Advertisement

ಪ್ರವಾಹ ಪೀಡಿತ ಪ್ರದೇಶ ಕೊಡಗಿನ ಉಸ್ತುವಾರಿಯಾಗಿ ಜಿಲ್ಲೆಗೆ ಭೇಟಿ ನೀಡಿದ ಸಚಿವರು ಕುಶಾಲನಗರ, ನೆಲ್ಯಹುದಿಕೇರಿ ಬಳಿಯ ಕುಂಬಾರಗುಂಡಿ, ಸಿದ್ದಾಪುರ ಬಳಿಯ ಕರಡಿಗೋಡು ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳು, ತೋರ ಭೂ ಕುಸಿತ ಪ್ರದೇಶ, ಮಾಕುಟ್ಟ ರಸ್ತೆ ವೀಕ್ಷಣೆ ಹಾಗೂ ವಿರಾಜಪೇಟೆಯ ಅಯ್ಯಪ್ಪ ಬೆಟ್ಟದಲ್ಲಿ ಭೂಮಿ ಬಿರುಕು ಬಿಟ್ಟಿರುವ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿದರು. ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಜೊತೆ ಮಾತನಾಡಿದ ಸಚಿವರು ಪ್ರವಾಹದಿಂದ ತುಂಬಾ ತೊಂದರೆಗೆ ಒಳಗಾಗಿರುವವರು ಸ್ಥಳಾಂತರವಾಗಲು ಮನಸ್ಸು ಮಾಡಬೇಕು. ಸರಕಾರದಿಂದ ಮನೆ ನಿರ್ಮಿಸಿಕೊಡಲಾಗುವುದು ಎಂದು ಸಚಿವರು ತಿಳಿಸಿದರು.
ಕುಂಬಾರಗುಂಡಿ ಮತ್ತು ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಈ ಸಂಬಂಧ ಸಚಿವ ಸಂಪುಟಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಸುಮಾರು 190 ಕ್ಕೂ ಹೆಚ್ಚು ಮನೆಗಳು ಹಾನಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಕುಟುಂಬಗಳನ್ನು ಸ್ಥಳಾಂತರಿಸಿ ಮನೆ ನಿರ್ಮಿಸಿಕೊಡಬೇಕಿದೆ ಎಂದರು. ಈಗಾಗಲೇ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರಿಗೆ 10 ಸಾವಿರ ರೂ. ಪರಿಹಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಕೇಂದ್ರದ ಗೃಹ ಸಚಿವರು ಮತ್ತು ಹಣಕಾಸು ಸಚಿವರು ರಾಜ್ಯ ಪ್ರವಾಸ ಕೈಗೊಂಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ. ಸದ್ಯದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ಸುರೇಶ್ ಕುಮಾರ್ ಅವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನೂಪ್ ಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ಗಳಾದ ಗೋವಿಂದರಾಜು, ಪುರಂದರ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಇಬ್ರಾಹಿಂ, ಜಿ.ಪಂ. ಎಂಜಿನಿಯರ್ ರೇವಣ್ಣವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಇತರರು ಹಾಜರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group