ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ದೊರಕಿದಲ್ಲಿ ಭಾರತ ವಿಶ್ವಗುರು – ರಾಘವೇಶ್ವರ ಶ್ರೀ

September 14, 2019
6:45 PM

ಬೆಂಗಳೂರು: ಭಾರತೀಯತೆಯ, ಭಾರತೀಯ ಸನಾತನ ಧರ್ಮ ಸಂಸ್ಕೃತಿಯ ಹಸಿವು ಇಂದು ಸಮಾಜದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಸಮಾಜಕ್ಕೆ ಈ ಹಂತದಲ್ಲಿ ಸೂಕ್ತ ಮಾರ್ಗದರ್ಶನ ದೊರಕಿದಲ್ಲಿ ಮಾತ್ರ ಭಾರತ ವಿಶ್ವಗುರುವಾಗಬಲ್ಲದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.

Advertisement
Advertisement

ಗಿರಿನಗರ ರಾಮಾಶ್ರಯದಲ್ಲಿ ಶನಿವಾರ ನಡೆದ ರಾಮಾಯಣ ಚಾತುರ್ಮಾಸ್ಯ ಸೀಮೋಲ್ಲಂಘನದ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಈ ಬಾರಿಯ ಚಾತುರ್ಮಾಸ್ಯವನ್ನು ರಾಮಾಯಣ ಚಾತುರ್ಮಾಸ್ಯವಾಗಿ ಆಚರಿಸಲಾಗಿದ್ದು, ನಿರಂತರವಾಗಿ ಧಾರಾ ರಾಮಾಯಣ ಪ್ರವಚನ ನಡೆದಿದೆ. ರಾಮಾಯಣ ಸರ್ವವೇದಗಳ ಸಾರ; ಇದು ಗುರು-ಶಿಷ್ಯರ ನಡುವಿನ ಬಾಂಧವ್ಯ ಬೆಸೆಯಲು ಸಹಕಾರಿ. ಅರುವತ್ತು ದಿನಗಳ ಕಾಲ ನಿರಂತರವಾಗಿ ನಡೆದ ಧಾರಾ ರಾಮಾಯಣ, ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಭಾಷ್ಯ ಬರೆದಿದೆ ಎಂದು ಬಣ್ಣಿಸಿದರು. ಭಾರತದ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದ ವಿಶ್ವವಿದ್ಯಾಪೀಠದ ಸ್ಥಾಪನೆಗೆ ಸಂಕಲ್ಪಿಸಿ ನಡೆಸಿದ ಈ ಧಾರಾ ರಾಮಾಯಣ ಸಾರ್ಥಕವಾಗುವುದು ಶ್ರೀಸಂಕಲ್ಪ ಕೈಗೂಡಿದಾಗ ಎಂದು ಅಭಿಪ್ರಾಯಪಟ್ಟರು.

ಚಾತುರ್ಮಾಸ್ಯ ಇರುವುದೇ ಚೈತನ್ಯ ಸಂಗ್ರಹಕ್ಕೆ; ಕೇವಲ ಸನ್ಯಾಸಿಗಳಿಗೆ ಮಾತ್ರವಲ್ಲದೇ ಗೃಹಸ್ಥರಿಗೂ ಇದು ಅನ್ವಯಿಸುತ್ತದೆ. ಶಕ್ತಿಸಂಚಯನಕ್ಕೆ ಚಾತುರ್ಮಾಸ್ಯ ಪ್ರಶಸ್ತ ಕಾಲ. ಈ ಬಾರಿಯಂತೂ ವೇದಗಳ ಸಾರವಾದ ರಾಮಾಯಣದ ಮೂಲಕ ಈ ಕಾರ್ಯ ಮತ್ತಷ್ಟು ಚೆನ್ನಾಗಿ ನಡೆದಿದೆ ಎಂದು ಹೇಳಿದರು. ಚಾರ್ತುಮಾಸ್ಯ  ಸುವ್ಯವಸ್ಥಿತವಾಗಿ, ವೈಭವೋಪೇತವಾಗಿ ನಡೆದಿದೆ. ಶ್ರೀಮಠದ ಇತಿಹಾಸಲ್ಲೇ ಮೊದಲ ಬಾರಿಗೆ ಎರಡು ತಿಂಗಳ ಪರ್ಯಂತ ಶ್ರೀರಾಮದೇವರಿಗೆ ಸುವರ್ಣ ಮಂಟಪದಲ್ಲಿ ಪೂಜಾಸೇವೆ ನೆರವೇರಿತು. ಸಾವಿರಾರು ಶಿಷ್ಯಭಕ್ತರಿಗೆ ಸೇವೆ ಮಾಡುವ ಅವಕಾಶ ಲಭಿಸಿದೆ ಎಂದು ಬಣ್ಣಿಸಿದರು.

ರಾಮಚಂದ್ರ ಹೆಗಡೆ ನಿಸ್ರಾಣಿ ಅವರ ಪರವಾಗಿ ಶ್ರೀಮಠದ ಸಮ್ಮುಖ ಸರ್ವಾಧಿಕಾರಿ ಟಿ.ಮಡಿಯಾಳ್ ಚಾತುರ್ಮಾಸ್ಯ ಪ್ರಶಸ್ತಿ ಸ್ವೀಕರಿಸಿದರು.

ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ವಾದಿರಾಜ ಸಾಮಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ. ಭಟ್, ಹಿರಿಯ ಪತ್ರಕರ್ತ ವಿನಾಯಕ ಭಟ್ ಮುರೂರು, ಚಾತುರ್ಮಾಸ್ಯ ಸಮಿತಿ ಕಾರ್ಯಾಧ್ಯಕ್ಷ ರಮೇಶ್ ಹೆಗಡೆ ಕೋರಮಂಗಲ, ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ ಕಜೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಕಾರ್ಯದರ್ಶಿ ನಾಗರಾಜ ಭಟ್, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತಿತರರು ಉಪಸ್ಥಿತರಿದ್ದರು.

Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ರಾಸಾಯನಿಕ ರಹಿತ ದಂತಮಂಜನ ‘ದಂತಸುರಭಿ’ ಲೋಕಾರ್ಪಣೆ | ಜನಜೀವನ ವಿಷದಿಂದ ಅಮೃತದತ್ತ ಸಾಗಲಿ: ರಾಘವೇಶ್ವರ ಶ್ರೀ ಆಶಯ
July 24, 2025
6:19 AM
by: The Rural Mirror ಸುದ್ದಿಜಾಲ
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಉತ್ತರ ಭಾರತದ ಹಲವೆಡೆ ಭಾರಿ ಮಳೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ |
July 23, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group