ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಮಹತ್ತರ

July 14, 2019
9:00 AM

ಕಡಬ: ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಮಹತ್ತರ ಪಾತ್ರ ವಹಿಸುತ್ತದೆ. ಹಾಗಾಗಿ ತನ್ನ ವೀಕ್ಷಕರನ್ನು ಹೆಚ್ಚುವ ಸಲುವಾಗಿ ದಿನವಿಡಿ ನಿಷ್ಪ್ರಯೋಜಕ ಸುದ್ದಿಯನ್ನು ಬಿತ್ತರಿಸುವ ಬದಲು ಸಮಾಜದ ಅಂಕುಡೊಂಕುಗಳನ್ನು ಸ್ಥೂಲವಾಗಿ ಪರಿಚಯಿಸಿ ಧನತ್ಮಾಕ ಚಿಂತನೆಯ ಮೂಲಕ ಸಂಬಂದಪಟ್ಟವರ ಗಮನ ಸೆಳೆದು ಸಮಸ್ಯೆ ಬಗೆಹರಿಸುವ ಕಾರ್ಯವಾಗಬೇಕು  ಎಂದು ಸಾರ್ವಜನಿಕ ಶಿಕ್ಷಣ ಇಲಾಖಾ ಉಪನಿರ್ದೇಶಕ ವೈ ಶಿವರಾಮಯ್ಯ ಹೇಳಿದರು.
ಕಡಬ ಸರಸ್ವತೀ ವಿದ್ಯಾಲಯದಲ್ಲಿ ಶನಿವಾರ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಮಾತನಾಡಿ, ಪ್ರಸಕ್ತ ಕಾಲಘಟ್ಟದಲ್ಲಿ ಮಾದ್ಯಮವು ಜಾತಿ ಧರ್ಮ ರಾಜಕೀಯ ಪಕ್ಷದ ಓಲೈಕೆಗೆ ಸೀಮಿತವಾಗಿರುವುದರಿಂದ ಪರ್ತಕರ್ತನ ಘನತೆ ಕುಗ್ಗುತ್ತಿದೆ. ಆದರೂ ಪತ್ರಿಕಾ ಧರ್ಮವನ್ನು ಪರಿಪಾಲಿಸುವ ಪತ್ರಕರ್ತನಿಗೆ ಸಮಾಜದಲ್ಲಿ ಸ್ಥಾನ ಮಾನಕ್ಕೆ ಕೊರತೆಯಾಗುವುದಿಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಉಪವಿಭಾಗ ಉಪಧೀಕ್ಷಕ ದಿನಕರ ಶೆಟ್ಟಿ ಮಾತನಾಡಿ, ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಸಮಾಜದಲ್ಲಿ ಆಶಾಂತಿ ಉಂಟಾಗುತ್ತಿದೆ. ಸಜ್ಜನರ ಮೌನವೇ ಈ ದುಸ್ಥಿಗೆ ಕಾರಣವಾಗುತ್ತಿದೆ ಎನ್ನುವ ಸತ್ಯವನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ , ಸರಸ್ವತೀ ವಿದ್ಯಾಲಯ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಶುಭಹಾರೈಸಿದರು. ಶ್ರೀನಿವಾಸ ಇಂದಾಜೆ ಮತ್ತು ವಿಜಯಲಕ್ಷ್ಮೀ ಶಿಬರೂರು ಅವರನ್ನು ಸನ್ಮಾನಿಸಲಾಯಿತು.

Advertisement

ಪತ್ರಕರ್ತ ಪ್ರಕಾಶ್ ಕೊಡಿಂಬಾಳ, ವಿಜಯಕುಮಾರ್ ಪೆರ್ಲ ಸನ್ಮಾನ ಪತ್ರ ವಾಚಿಸಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೊೈಲ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯದರ್ಶಿ ನಾಗರಾಜ್ ಎನ್ ಕೆ ವಂದಿಸಿದರು. ಪ್ರಾಂಶುಪಾಲ ಮಹೇಶ್ ನಿಟಲಾಪುರ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿಜಯಲಕ್ಷ್ಮೀ ಶಿಬರೂರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ
April 22, 2025
5:50 PM
by: ಸಾಯಿಶೇಖರ್ ಕರಿಕಳ
ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |
April 22, 2025
7:18 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ
April 22, 2025
6:51 AM
by: The Rural Mirror ಸುದ್ದಿಜಾಲ
ಹಾವು, ಕಾಗೆ, ನಾಯಿಗಳು ಕನಸಿನಲ್ಲಿ ಬಂದ್ರೆ ನಿರ್ಲಕ್ಷ್ಯ ಮಾಡ್ಬೇಡಿ…!
April 22, 2025
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group