ಸರಳಗೊಳಿಸುವ ಉದ್ದೇಶದಿಂದ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು

September 7, 2019
4:00 PM

ಸುಳ್ಯ: ಅತ್ಯಂತ ಕ್ಲಿಷ್ಟವಾಗಿದ್ದ ತೆರಿಗೆ ವ್ಯವಸ್ಥೆಯನ್ನು  ಸರಳಗೊಳಿಸುವ ಉದ್ದೇಶಹೊಂದಿರುವ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು ಮತ್ತು ಹಳೆಯ ವ್ಯವಸ್ಥೆಯಿಂದ ಹೊಸ  ತೆರಿಗೆ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದರೆ ಅದರ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದು ಅತೀ ಅಗತ್ಯ  ಎಂದು ನೆಹರು ಪದವಿ ಕಾಲೇಜಿನ ವಾಣಿಜ್ಯ  ವಿಭಾಗದ ಉಪನ್ಯಾಸಕರಾದ  ಪ್ರೊ. ರುದ್ರಕುಮಾರ್   ಹೇಳಿದರು.

Advertisement

ಅವರು ಕಾಲೇಜಿನ  ವಾಣಿಜ್ಯ  ಸಂಘ ಆಯೋಜಿಸಿದ್ದ ಜಿ ಎಸ್ ಟಿ  ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಹೊಸ ತೆರಿಗೆ ವ್ಯವಸ್ಥೆಯ ಚಿಂತನೆ ಯಾಕೆ ಬಂತು, ಅದನ್ನು ಯಾವ ರೀತಿಯಾಗಿ ಅಳವಡಿಸುವ ಪ್ರಯತ್ನಗಳು ನಡೆದವು ಮತ್ತು ಒಟ್ಟಾರೆಯಾಗಿ ಹೊಸ ತೆರಿಗೆ ವ್ಯವಸ್ಥೆ ಏನು ಎಂಬುದನ್ನು ಸವಿವರವಾಗಿ  ತಿಳಿಯಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ  ಭವಿಷ್ಯದ ಉದ್ಯೋಗದ ಅವಕಾಶಗಳನ್ನು ಬಳಸಿಕೊಳ್ಳಬೇಕಾದರೆ ಸಮಯಕ್ಕೆ ಸರಿಯಾಗಿ ಆಗುಹೋಗುಗಳನ್ನು ತಿಳಿದುಕೊಳ್ಳುವುದು  ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಉಪನ್ಯಾಸಕರಾದ  ಸಾವಿತ್ರಿ ಮತ್ತು ಕು. ಹರ್ಷಿತಾ  ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯತಾ ಅತಿಥಿಗಳನ್ನು ಪರಿಚಯಿಸಿ, ವಿಸ್ಮಿತ ಸ್ವಾಗತಿಸಿ, ವಿದ್ಯಾರ್ಥಿ ಮೋಕ್ಷಿತ್ ವಂದಿಸಿದರು. ಆಕಾಂಕ್ಷ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group