ಸವಣೂರು : ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶ್ರೀಕೃಷ್ಣಲೋಕ

August 24, 2019
4:00 PM

ಸವಣೂರು: ಇಲ್ಲಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನು ಆಚರಿಸಲಾಯಿತು.ಭಗವಾನ್ ಶ್ರೀಕೃಷ್ಣನ ಪ್ರತಿಮೆಗೆ ಪುಷ್ಪಾರ್ಚನೆಗೈದು ಮಾತನಾಡಿದ ಶಾಲಾ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು , ಶ್ರೀಕೃಷ್ಣನ ಆದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತವೆ.ಜಗತ್ತು ಕಂಡ ಅತ್ಯುತ್ತಮ ನಿರ್ವಹಣಾ ಶಾಸ್ತ್ರಜ್ಞ ಅಂದರೆ ಶ್ರೀಕೃಷ್ಣ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರಿನ ಭಕ್ತಿವೇದಾಂತ ಅಕಾಡೆಮಿ ಫಾರ್ ಕಲ್ಚುರಲ್ ಅಂಡ್ ಕ್ಯಾರೆಕ್ಟರ್ ಎಜ್ಯುಕೇಶನ್ ಇದರ ಸ್ಥಾಪಕರಾದ ಶರದ್‍ವಿಹಾರಿ ದಾಸ್‍ಮಾತನಾಡಿ ,ಶ್ರೀಕೃಷ್ಣನ ವಿಸ್ತೃತ ಪರಿಚಯವನ್ನು ನೀಡಿದರು.
ಬಳಿಕ 10ನೆ ತರಗತಿ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಉತ್ತಮ ಅಧ್ಯಯನ ಮಾಡುವ ವಿಧಾನವನ್ನು ಮನನಮಾಡಿಕೊಟ್ಟರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕೃಷ್ಣ ಮತ್ತು ರಾಧೆಯರ ವೇಷಧಾರಣೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು.

ಶಿಕ್ಷಕರಾದ ಸುಬ್ಯಹ್ಮಣ್ಯ ಭಟ್ ಮತ್ತು ವಿನಯಾ ನಿರ್ಣಾಯಕರಾಗಿದ್ದರು.ಚೇತನಾ ಸ್ಪರ್ಧೆಯನ್ನು ಸಂಘಟಿಸಿದರು.ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲ ಸೀತಾರಾಮ ಕೇವಳ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು. ಸಹಾದಿಯಾ ಅತಿಥಿಗಳ ಪರಿಚಯಿಸಿದರು.
ಸಮಹಿತ್ ಜೈನ್ ಸ್ವಾಗತಿಸಿ , ವೈಷ್ಣವಿ ಎಂ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror