ಸುಳ್ಯ: ವಿದ್ಯಾರ್ಥಿಗಳು ತಮಗೆ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಅದಕ್ಕಾಗಿ 21ನೇ ಶತಮಾನದ ಬದಲಾವಣೆಗಳಿಗೆ ಒಗ್ಗಿಕೊಳ್ಳಲು ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದಲ್ಲಿ ನಡೆದ 2019-20ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸುಳ್ಯ ಶಾಸಕ ಎಸ್. ಅಂಗಾರ ,ವಿಚಾರಕ್ಕೆ ಮಹತ್ವ ಕೊಟ್ಟಾಗ ನಮ್ಮನ್ನು ನಾವು ಗುರುತಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಯುತ ಪೂಜಾರಿ ಕೆ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ 2018-19 ನೇ ಸಾಲಿನ ವಾರ್ಷಿಕ ಸಂಚಿಕೆ ‘ಅಮರ’ ವನ್ನು ಬಿಡುಗಡೆ ಮಾಡಲಾಯಿತು.ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಗಳಾದ ಜಶ್ಮಿ ಪಿ. ಯು, ಐಶ್ವರ್ಯ ರೈ. ಬಿ. , ಹರ್ಷಿತ್. ಎ , ರಕ್ಷಿತ್ ಕೆ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಸತೀಶ್ ಕುಮಾರ್ ಕೆ. ಆರ್. ಅವರು ಸ್ವಾಗತಿಸಿ, ಸಾಂಸ್ಕೃತಿಕ ಸಂಘದ ಸಂಚಾಲಕರಾದ ಕು. ಲತಾ ಎನ್. ಅವರು ವಂದಿಸಿದರು. . ಉಪನ್ಯಾಸಕರಾದ ಧನರಾಜ್ ಕುಮಾರ್ ಹಾಗೂ ಸುರೇಖಾ ಹೆಚ್. ನಿರೂಪಿಸಿದರು. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.