ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಹಾಗೂ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷೆ ಕೆ.ಲಲಿತ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಡಾ.ಬಿ.ಡಿ.ಭೂಕಾಂತ, ನಿರ್ದೇಶಕ ಚಿತ್ತರಂಜನ್ ಬೋಳಾರ್, ಮಾಜಿ ಅಧ್ಯಕ್ಷ ಡಾ.ಶೇಖರ ವಿ.ಮಾಲಿ ಪಾಟೀಲ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.
ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಉಪಾಧ್ಯಕ್ಷ ಪಿ.ಎಸ್.ಗಂಗಾಧರ, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್ ಉಪಸ್ಥಿತರಿದ್ದರು. ಮಹಾಮಂಡಳದ ಸಲಹೆಗಾರ ಕೆ.ಎಸ್.ಗುರುಪ್ರಸಾದ್ ಸ್ವಾಗತಿಸಿರು. ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.