ಸಹಕಾರಿ ಸಂಘದ ಚುನಾವಣೆಯಲ್ಲಿ ಗೆಲುವು ನಿಶ್ಚಿತ- ಹರೀಶ್ ಕಂಜಿಪಿಲಿ

January 9, 2020
3:35 PM

 

Advertisement

ಸುಳ್ಯ: ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಉತ್ತಮ ಗೆಲುವು ದಾಖಲಿಸಲಿದೆ ಎಂದು ಬಿಜೆಪಿ ಮಂಡಲ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 23 ಸಹಕಾರಿ ಸಂಘಗಳ ಪೈಕಿ ಕಳೆದ ಬಾರಿ 17 ಸಹಕಾರಿ ಸಂಘಗಳಲ್ಲಿ ಆಡಳಿತ ಪಡೆದಿತ್ತು. ಈ ಬಾರಿ ಆ ಸಂಘಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಹೆಚ್ಚಿನ ಸಂಘಗಳಲ್ಲಿ ಅಧಿಕಾರ ಪಡೆದುಕೊಳ್ಳಲಿದೆ. ಚುನಾವಣೆಯನ್ನು ಎದುರಿಸಲು ಎಲ್ಲಾ ಸಿದ್ಧತೆಗಳನ್ನೂ ಮಾಡಲಾಗಿದೆ. ಮರ್ಕಂಜ ಸಹಕಾರಿ ಸಂಘದಲ್ಲಿ ಈಗಾಗಲೆ ಸಹಕಾರ ಭಾರತಿಯ 10ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌. ಸಂಪಾಜೆ ಸಂಘದಲ್ಲಿ ನಾಮಪತ್ರ ಸಲ್ಲಿಸಲು ಪಕ್ಷದ ಕಡೆಯಿಂದ ಸೂಚನೆ ನೀಡಲಾಗಿತ್ತು. ಆದರೆ ಅಲ್ಲಿ ಸಹಕಾರಿ ಸಂಘದಲ್ಲಿ ಬಿಜೆಪಿಗೆ ಮತದಾರರು ಕಡಿಮೆ ಇರುವ ಕಾರಣ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಗ್ರಾಮ ಸಮಿತಿ ಮನಸು ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಮಾಡಲು ಎಲ್ಲಾ ಪ್ರಯತ್ನಗಳನ್ನು ನಡೆಸಿದರೂ ಯಾರೆಲ್ಲ ಅಡ್ಡ ಮತದಾನ ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ, ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಸಹಕಾರ ಭಾರತಿ ಸುಳ್ಯ ತಾಲೂಕು ಅಧ್ಯಕ್ಷ ಪ್ರವೀಣ್ ರಾವ್ ದೊಡ್ಡತೋಟ, ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group