ಬೆಳ್ಳಾರೆ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಉಪನಿರ್ದೇಶಕರ ಕಛೇರಿ ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಆದಿಚುಂಚನಗಿರಿ ಸಂಯುಕ್ತ ಆಂಗ್ಲಮಾಧ್ಯಮ ಶಾಲೆ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡ ಪುತ್ತೂರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಸಾತ್ವಿಕ ಶಿವಾನಂದ ಪಿ.ಎಸ್ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೆಳ್ಳಾರೆಯ ಕೃಷಿಕ ಶ್ರೀರಾಮ್ ಪಾಟಾಜೆ ಹಾಗು ಶಿಲ್ಪಾ ದಂಪತಿಯ ಪುತ್ರರಾಗಿರುವ ಇವರು ಕೋಲ್ಕತ್ತಾದಲ್ಲಿ ನವಂಬರ್ 21ರಿಂದ 24ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟ ಸ್ಪರ್ಧೆಯಲ್ಲಿ ಕರ್ನಾಟಕ ತಂಡದ ನಾಯಕರಾಗಿ ಆಡಲಿದ್ದಾರೆ. ಸಾತ್ವಿಕ ಶಿವಾನಂದ ಅವರು ಪುತ್ತೂರಿನ ಜೀನಿಯಸ್ ಚೆಸ್ ಸ್ಕೂಲ್‌ನಲ್ಲಿ ಸತ್ಯಪ್ರಸಾದ್ ಕೋಟೆ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel