ಸಾಮಾಜಿಕ ಜಾಲತಾಣ ಬಿಡಿ, ಎನ್ ಸಿ ಸಿ ಸೇರಿ

July 12, 2019
5:00 PM

ಮಡಿಕೇರಿ  : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೇಲಿನ ಒಲವನ್ನು ಬಿಟ್ಟು ಶೈಕ್ಷಣಿಕ ಗುರಿ ಸಾಧಿಸಲು ಪುಸ್ತಕದ ಕಡೆ ಹೆಚ್ಚಿನ ಗಮನ ಹರಿಸಬೇಕು ಮತ್ತು ಶಿಸ್ತುಬದ್ಧ ಜೀವನ ನಡೆಸಲು ಎನ್ ಸಿ ಸಿ ಸೇರಿ ಎಂದು  ಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ವಿ.ಎಂ.ನಾಯಕ್ ಕರೆ ನೀಡಿದ್ದಾರೆ.

Advertisement
Advertisement

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಎನ್‍ಸಿಸಿ ಸಹಯೋಗದಲ್ಲಿ ಕಾಲೇಜ್‍ನಲ್ಲಿ ನಡೆದ “ಎನ್‍ಸಿಸಿ ಸೇರ್ಪಡೆ” ದಿಕ್ಸೂಚಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಎನ್‍ಸಿಸಿ ತನ್ನದೇ ಆದ ಮೌಲ್ಯ ಹಾಗೂ ಮಹತ್ವವನ್ನು ಹೊಂದಿದ್ದು, ಇದರಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಇತರರಿಗಿಂತ ಭಿನ್ನವಾಗಿರುತ್ತಾರೆ. ಕೇವಲ ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಶಿಸ್ತನ್ನು ಅಳವಡಿಸಿಕೊಳ್ಳದೆ ಜೀವನದುದ್ದಕ್ಕೂ ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು. ಎನ್‍ಸಿಸಿ ಬೆಳೆದು ಬಂದ ಹಾದಿ ಹಾಗೂ ಅದರ ಕಾರ್ಯವೈಖರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಕರ್ನಲ್ ನಾಯಕ್, ಎನ್‍ಸಿಸಿ ಯಲ್ಲಿ ವಿಫುಲ ಅವಕಾಶಗಳಿದ್ದು, ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್‍ನ ಪ್ರಾಂಶುಪಾಲ ಡಾ.ಟಿ.ಡಿ.ತಿಮ್ಮಯ್ಯ ಅವರು ಎನ್‍ಸಿಸಿ ವಿದ್ಯಾರ್ಥಿಗಳು ತಮ್ಮ ಶಿಸ್ತುಬದ್ಧ ಜೀವನ ಶೈಲಿಯ ಮೂಲಕವೇ ಇತರರಿಗೆ ಮಾದರಿಯಾಗಬೇಕೆಂದರು.
ಎನ್‍ಸಿಸಿ ಅಧಿಕಾರಿ ಮೇಜರ್ ಡಾ.ಬಿ.ರಾಘವ ಮಾತನಾಡಿ, ಎನ್‍ಸಿಸಿ ಗೆ ತನ್ನದೇ ಆದ ಇತಿಹಾಸವಿದ್ದು, ಬಹಳಷ್ಟು ವಿದ್ಯಾರ್ಥಿಗಳು ಇದರಲ್ಲಿ ತೊಡಗಿಸಿಕೊಂಡು ಶಿಸ್ತು ಮತ್ತು ಸಂಯಮವನ್ನು ಬೆಳೆಸಿಕೊಂಡಿದ್ದಾರೆ.

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವ | ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು | ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸಂಸದ ಬ್ರಿಜೇಶ್‌ ಚೌಟ ಒತ್ತಾಯ |
July 24, 2025
10:40 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |
July 23, 2025
6:49 AM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
ಜನನ-ಮರಣ 21 ದಿನಗಳೊಳಗೆ  ನೋಂದಣಿ ಕಡ್ಡಾಯ – ದ ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ
July 22, 2025
9:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group