ಸಾರ್ವಜನಿಕರಿಗೂ ಹೆಲ್ತ್ ಮೀಡಿಯಾ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ

November 18, 2019
7:55 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ನಿಂದ ಹೆಲ್ತ್ ಮೀಡಿಯಾ ಕ್ಲಿನಿಕ್‌ ಯೋಜನೆಯಡಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ಉಚಿತ ಅರೋಗ್ಯ ತಪಾಸಣೆ ಹಲವು ತಿಂಗಳಿನಿಂದ ನಡೆಯುತ್ತಿದ್ದು, ಇದನ್ನು ಸಾರ್ವಜನಿಕರಿಗೂ ಮುಂದುವರಿಸಲು ನಿರ್ಧರಿಸಲಾಗಿದೆ.

Advertisement
Advertisement

ನ.19ರಂದು ಉದ್ಘಾಟನೆ: ಉಚಿತ ಆರೋಗ್ಯ ಶಿಬಿರವನ್ನು ನ.19ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಲಕ್ಷ್ಮೀ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಅಶೋಕ್ ಹೆಗ್ಡೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಭಾಗವಹಿಸಲಿದ್ದಾರೆ.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸಲಿದ್ದಾರೆ. ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ ಇಂದಿನಿಂದ ಪ್ರತಿ ತಿಂಗಳ ಎರಡನೇ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಇದರ ಪ್ರಯೋಜವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು. ಈಗಾಗಲೇ 200 ಕ್ಕೂ ಹೆಚ್ಚು ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಅರೋಗ್ಯ ತಪಾಸಣೆ ಮಾಡಿರುತ್ತಾರೆ.

ತಪಾಸಣೆ ವಿವರ: ರಕ್ತ ತಪಾಸಣೆ, ಬಿಪಿ, ಇಸಿಜಿ ಪರೀಕ್ಷೆ, ಡಯಾಬಿಟೀಸ್ ಸೇರಿದಂತೆ ಅರೋಗ್ಯದಲ್ಲಿ ಸಮಸ್ಯೆಗಳಿದ್ದಲ್ಲಿ ವೈದ್ಯರೊಂದಿಗೆ ಸಮಾಲೋಚನೆ ಮಾಡಬಹುದಾಗಿದೆ. ಮಹಿಳೆಯರಿಗೆ ತಜ್ಞ ವೈದ್ಯೆಯರಿಂದ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಪತ್ರಕರ್ತರು ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದೆಂದು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ | 17ನೇ ಕಂತಿನ ಹಣ ರೈತರ ಖಾತೆಗೆ ಯಾವಾಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror