ಸಿದ್ಧವಾಗಿದೆ ಯಕ್ಷಗಾನ ಪಠ್ಯ ಪುಸ್ತಕ

September 29, 2019
11:38 AM

ಸುಳ್ಯ: ಪ್ರಪ್ರಥಮ ಯಕ್ಷಗಾನ ಪಠ್ಯಪುಸ್ತಕ ಸಿದ್ಧಗೊಂಡಿದೆ. ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯ ಪ್ರಥಮ ಅವಧಿಯ ಮಹತ್ವಾಕಾಂಕ್ಷಿ ಯಕ್ಷ ಶಿಕ್ಷಣ ಯೋಜನೆ ದಶಕದ ಬಳಿಕ ಸಾಕಾರವಾಗಿದೆ ಎಂದು ಯಕ್ಷಗಾನ ಶಿಕ್ಷಣ ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯ ಡಾ. ಸುಂದರ ಕೇನಾಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement
Advertisement
Advertisement
Advertisement

ಈ ಪಠ್ಯಪುಸ್ತಕದ ಆಧಾರದಲ್ಲಿ ಖಾಸಗಿಯಾಗಿ ಗುರು ಮುಖೇನ ಯಕ್ಷಗಾನ ಮುಮ್ಮೇಳ ಕಲಿಯಬಹುದು. ಇದೇ ವರ್ಷ ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿ ಯಕ್ಷಗಾನ ಜೂನಿಯರ್ ಸರ್ಟಿಫಿಕೆಟ್ ಪರೀಕ್ಷೆ ಆರಂಭಿಸುತ್ತಿದೆ. ಜೂನಿಯರ್ ಪರೀಕ್ಷೆ ಬರೆಯಲು ಕನಿಷ್ಠ 2 ವರ್ಷ ಕಲಿಕೆ ನಿಗದಿಪಡಿಸಲಾಗಿದೆ. ಜೂನಿಯರ್ ಪರೀಕ್ಷೆ ಮುಗಿಸುವ ಹೊತ್ತಿಗೆ ಸೀನಿಯರ್ ಪಠ್ಯ ಮುದ್ರಣಗೊಳ್ಳುವ ಸಾಧ್ಯತೆ ಇದೆ. ಸೀನಿಯರ್ ಪರೀಕ್ಷೆ ಕಲಿಕೆಗೂ 2 ವರ್ಷ ನಿಗದಿಪಡಿಸಲಾಗಿದೆ. ನಂತರ ವಿದ್ವತ್ ಎರಡು ಹಂತದಲ್ಲಿ ನಡೆಯಲಿದೆ. ಇದಕ್ಕೆ ಪಠ್ಯವಸ್ತುವಿನಿಂದ ಹಿಡಿದು ಪುಸ್ತಕ ರಚನೆ ಹಾಗೂ ಇತರ ಕಾರ್ಯಗಳು ನಡೆಯಬೇಕಾಗಿದೆ ಎಂದು ತಿಳಿಸಿದರು.

Advertisement

ಪಠ್ಯದ ಒಳಗೇನಿದೆ? ಪ್ರಾಥಮಿಕ ಪಠ್ಯಪುಸ್ತಕದಲ್ಲಿ ತೆಂಕು – ಬಡಗುತಿಟ್ಟು ಯಕ್ಷಗಾನದ ಕಲಿಕಾ ವಿಷಯ ಒಳಗೊಂಡಿದೆ. ಒಟ್ಟು ನಾಲ್ಕು ಪ್ರಮುಖ ಅಧ್ಯಾಯಗಳು, ಅದರೊಳಗೆ ಘಟಕಗಳಲ್ಲಿ ವಿವರಣೆ ಇದೆ. ಅಧ್ಯಾಯ ಒಂದರಲ್ಲಿ ಯಕ್ಷಗಾನ ಪರಿಚಯ, ಅದರ ಅಂಗಗಳು ಮತ್ತು ಇತಿಹಾಸ ವಿವರಿಸಲಾಗಿದೆ. ಎರಡರಲ್ಲಿ ರಂಗಸ್ಥಳ, ಚೌಕಿ, ವೇಷಭೂಷಣಗಳು, ಬಣ್ಣಗಾರಿಕೆ ಬಗ್ಗೆ ತಿಳಿಸಲಾಗಿದೆ. ಅಧ್ಯಾಯ ಮೂರರಲ್ಲಿ ಪ್ರಸಂಗಗಳು ಮತ್ತು ಅರ್ಥಗಾರಿಕೆ ಬಗ್ಗೆ ವಿವರಿಸಲಾಗಿದೆ. ಘಟಕಗಳಲ್ಲಿ ಅಭ್ಯಾಸಕ್ಕಾಗಿ ಕೆಲವು ಪ್ರಸಂಗಗಳನ್ನು ನೀಡಲಾಗಿದೆ. ಕೊನೆಯ ಹಾಗೂ ಹೆಚ್ಚು ಪ್ರಾಯೋಗಿಕ ಅಧ್ಯಾಯ ಯಕ್ಷಗಾನ ಶಿಕ್ಷಣ. ಇಲ್ಲಿ ಆರು ಘಟಕಗಳನ್ನು ರಚಿಸಲಾಗಿದೆ. ಅದರಲ್ಲಿ ಲಯ, ಕಾಲ, ತಾಳಗಳ ಪರಿಕಲ್ಪನೆ, ತೆಂಕುತಿಟ್ಟು ತಾಳಗಳು ಮತ್ತು ಹೆಜ್ಜೆಗಾರಿಕೆ, ತೆಂಕುತಿಟ್ಟಿನ ರಂಗಕ್ರಮಗಳು, ಬಡಗುತಿಟ್ಟಿನ ತಾಳಗಳು ಮತ್ತು ಹೆಜ್ಜೆಗಾರಿಕೆ, ಬಡಗುತಿಟ್ಟಿನ ರಂಗಕ್ರಮಗಳು, ಅಭಿನಯ ಮತ್ತು ರಂಗಗತಂತ್ರಗಳು ಇವುಗಳನ್ನು ಅಳವಡಿಸಿಕೊಳ್ಳಲಾಗಿದೆ.

ಆಸಕ್ತರು ಸರ್ಕಾರಿ ಮುದ್ರಣಾಲಯ ಬೆಂಗಳೂರು 080-22213474, ಮೈಸೂರು 0821-2540684, ಧಾರವಾಡ 0836-2748145ಗೆ ಸಂಪರ್ಕಿಸಬಹುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಪ್ರೊ.ಎಂ.ಎಲ್. ಸಾಮಗ ಅವರ ಕೊಡುಗೆ ಸ್ಮರಣೀಯ ಎಂದು ಡಾ. ಕೇನಾಜೆ ಹೇಳಿದರು.

Advertisement

ಸಮಿತಿ ಅಧ್ಯಕ್ಷ ಕುಂಬ್ಳೆ ಸುಂದರ ರಾವ್, ಸದಸ್ಯರಾದ ಪ್ರಕಾಶ್ ಮೂಡಿತ್ತಾಯ, ಸುಜಿಯಿಂದ್ರ ಹಂದೆ ಸುದ್ದಿಗೋಷ್ಠಿಯಲ್ಲಿದ್ದರು.

Advertisement

ಮೌಲ್ಯಮಾಪನಕ್ಕಾಗಿ ಅಭ್ಯಾಸ ಪ್ರಶ್ನೆ: ಎಲ್ಲ ಘಟಕಗಳ ಕೊನೆಯಲ್ಲಿ ಮೌಲ್ಯಮಾಪನಕ್ಕಾಗಿ ಅಭ್ಯಾಸ ಪ್ರಶ್ನೆಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗಲು ಹಲವು ಸಂಕೇತಗಳನ್ನು ನೀಡಲಾಗಿದೆ. ಈ ಸಂಕೇತಗಳ ಮೂಲಕ ಯಕ್ಷಗಾನ ಅಭ್ಯಾಸ ಮೊದಲ ಪ್ರಯೋಗ. ಈ ಪ್ರಯೋಗಕ್ಕೆ ಹೆಚ್ಚಿನ ಕಾಲಾವಕಾಶ ಹಾಗೂ ಪರಿಶ್ರಮ ಹಾಕಲಾಗಿದೆ. ಪಠ್ಯ ತಯಾರಿಯಲ್ಲಿ ಕೆಲವೊಂದು ಲೋಪವಾಗಿರುವ ಸಾಧ್ಯತೆ ಇದೆ. ಅದನ್ನು ಮುಂದಿನ ಹಂತದಲ್ಲಿ ಸರಿಪಡಿಸಿಕೊಳ್ಳಬಹುದು ಎಂದು ಕೇನಾಜೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror