ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯದ ಅರ್ಚಕರ ಮೇಲೆ ದೇವಸ್ಥಾನಕ್ಕೆ ಪೂಜೆಗೆ ಒಬ್ಬರೇ ತೆರಳುತ್ತಿದ್ದಾಗ ಹಲ್ಲೆ ನಡೆಸಿದ ಪೊಲೀಸ್ ಸಿಬಂದಿ ಶಂಕರ್ ಸಂಸಿ ಎಂಬವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧಿಕಾರಿ ಆದೇಶ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸ್ ಉಪವಿಭಾಗಾಧಿಕಾರಿಯಿಂದ ಘಟನೆಯ ಬಗ್ಗೆ ವರದಿ ಪಡೆದು ಪರಿಶೀಲಿಸಿದ್ದು ಮೇಲ್ನೋಟಕ್ಕೆ ಸದರಿ ಸಿಬ್ಬಂದಿಯ ದುರುವರ್ತನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಸದರಿ ಪೊಲೀಸ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಅದೇಶಿಸಿರುತ್ತಾರೆ ಹಾಗು ಇಲಾಖಾ ವಿಚಾರಣೆ ಮುಂದುವರೆದಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel