ಸುಬ್ರಹ್ಮಣ್ಯ ಕಾಲೇಜಿನಲ್ಲಿ ಅಹಿತಕರ ಘಟನೆ : ಪರಿಹಾರ ಕ್ರಮಕ್ಕೆ ಮನವಿ

September 27, 2019
10:00 AM

ಸುಬ್ರಹ್ಮಣ್ಯ:  ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಪ್ರತಿವರ್ಷವೂ ನಡೆಯುವ ಅಹಿತಕರ ಘಟನೆಯಿಂದ ವಿದ್ಯಾರ್ಥಿ ಗಳಲ್ಲಿ ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದಲ್ಲಿ ಆತಂಕ ಆವರಿಸಿದೆ. ಜೊತೆಗೆ  ಕಾಲೇಜಿನ ಹೆಸರಿಗೆ ಧಕ್ಕೆಯಾಗುತ್ತಿರುವುದರಿಂದ ಇದಕ್ಕೆ ಸೂಕ್ತವಾದ ಪರಿಹಾರ ಕ್ರಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರಿಗೆ ಮನವಿ ಮಾಡಲಾಯಿತು. ಈ ಸಂದರ್ಭ ಕಾಲೇಜ್ ನಲ್ಲಿ ಸ್ಥಳ ಪ್ರಶ್ನೆಯನ್ನು ಮಾಡಿ  ಸೂಕ್ತ ವಾದ ಪರಿಹಾರ ಕ್ರಮವನ್ನು ನೆರವೇರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಇದರ ನಗರ ಕಾರ್ಯದರ್ಶಿ ಹಿತೇಶ್ ಕಟ್ರಮನೆ, ಕಾರ್ಯಕರ್ತ ಮೋಕ್ಷಿತ್ ಕುಕ್ಕಪ್ಪಮನೆ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror