ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.
ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್‌ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು ಬರಮಾಡಿಕೊಂಡರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel