ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಲಕ್ಷ್ಮಣ ಶೆಣೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಅಭಿಮಾನಿಗಳು ಸೋಮವಾರ ಪ್ರಾರ್ಥನೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ಕೂಡಲೇ ಜಾಮೀನು ಪಡೆದು ಬಿಡುಗಡೆಯಾದರೆ ದೇವಸ್ಥಾನದಲ್ಲಿ ವಿಶೇಷ ಸೇವೆ ನಡೆಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಶೆಣೈ ತಿಳಿಸಿದ್ದಾರೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ದಿನೇಶ್ ಮಡ್ತಿಲ, ಶ್ರೀಲತಾ ಪ್ರಸನ್ನ, ಅನಿಲ್ ಬಳ್ಳಡ್ಕ, ಶಶಿಧರ, ವಸಂತ ಕುದ್ಪಾಜೆ, ಮಧುಸೂದನ ಬೂಡು, ತೀರ್ಥಪ್ರಸಾದ್ ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel